ಕಾರು ಮತ್ತು ಟೆಂಪೋ ನಡುವೆ ಮುಖಾಮುಖಿ ಡಿಕ್ಕಿ, ದಂಪತಿ ಸಾವು…

192
firstsuddi

ತುಮಕೂರು : ಕಾರು ಮತ್ತು ಟೆಂಪೋ ನಡುವೆ ಮುಖಾಮುಖಿ ಡಿಕ್ಕಿಯಾಗಿ ದಂಪತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಬಾಣವಾರ ಗೇಟ್ ಬಳಿ ನಡೆದಿದೆ. ರಾಮೇಗೌಡ(55), ಹೇಮಾ(50) ಮೃತ ದಂಪತಿ ಎನ್ನಲಾಗಿದ್ದು, ದಂಪತಿ ನಿನ್ನೆ ತಡರಾತ್ರಿ ಸಿಎಸ್ ಪುರದಿಂದ ತುಮುಕೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಟೆಂಪೋ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೆಬ್ಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.