ಕಾರು ಮತ್ತು ಟ್ರ್ಯಾಕ್ಟರ್ ನಡುವೆ ಭೀಕರ ಅಪಘಾತ – ಐವರು ಸ್ಥಳದಲ್ಲೇ ಸಾವು…

216
firstsuddi

ತುಮಕೂರು : ಕಾರು ಮತ್ತು ಟ್ರ್ಯಾಕ್ಟರ್ ನಡುವೆ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಹೊಸಕೆರೆ ಗ್ರಾಮದ ಬಳಿ ನಡೆದಿದೆ. ರಂಗಸ್ವಾಮಿ(58), ರಾಜಣ್ಣ(55), ಮಧು(26), ಕಿರಣ್(24) ಹಾಗೂ ಮೋಹನ್(22) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದ್ದು, ಮೃತರು ಕಾರಿನಲ್ಲಿ ಸಂಬಂಧಿಕರ ಮನೆಯಲ್ಲಿ ಹಬ್ಬ ಮುಗಿಸಿಕೊಂಡು ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಎದುರಿಗೆ ಚಲಿಸುತ್ತಿದ್ದ ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳೀಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.