ತುಮಕೂರು : ಕಾರು ಮರಕ್ಕೆ ಡಿಕ್ಕಿ ಹೊಡೆದು ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಿಪಟೂರು ತಾಲ್ಲೂಕಿನ ಕುಂದೂರುಪಾಳ್ಯದ ಬಳಿ ನಡೆದಿದೆ. ಕಿರಣ್(18), ತ್ರಿನೇಶ್(20) ಮೃತ ದುರ್ಧೈವಿಗಳು. ಮೃತರು ತುರುವೇಕೆರೆ ತಾಲ್ಲೂಕಿನ ದಂಡಿನಶಿವರದವರು ಎಂದು ತಿಳಿದು ಬಂದಿದ್ದು, ಚಿಕ್ಕಮಗಳೂರಿಗೆ ಸಿಇಟಿ ಪರೀಕ್ಷೆ ಬರೆಯಲು ತೆರಳುವಾಗ ಈ ಘಟನೆ ಸಂಭವಿಸಿದೆ. ಕಾರಿನಲ್ಲಿದ್ದ ಮೂವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, ತುರುವೇಕೆರೆ ಹಾಗೂ ದಂಡಿನಶಿವರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದ್ದು, ಘಟನೆ ಕೆ.ಬಿ ಕ್ರಾಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.