ಕಾರು ಹತ್ತುವಾಗ ಕುಸಿದು ಬಿದ್ದ ಸಿದ್ದರಾಮಯ್ಯ.

91
firstsuddi

ವಿಜಯನಗರ : ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ವಿಪಕ್ಷನಾಯಕ ಸಿದ್ದರಾಮಯ್ಯ ರಾಜ್ಯಾದ್ಯಂತ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ. ಇಂದು ಕೂಡ್ಲಗಿ ಅಭ್ಯರ್ಥಿ ಪರ ಪ್ರಚಾರಕ್ಕೆಂದು ಆಗಮಿಸಿದ್ದ ಸಿದ್ದರಾಮಯ್ಯ ಕಾರು ಹತ್ತುವ ವೇಳೆ ಕುಸಿದು ಬಿದ್ದಿದ್ದಾರೆ.

ಸಿದ್ದರಾಮಯ್ಯ ಕಾಂಗ್ರೆಸ್ ಅಭ್ಯರ್ಥಿ ಡಾ. ಎನ್.ಟಿ ಶ್ರೀನಿವಾಸ್ ಅವರ ಪರವಾಗಿ ಪ್ರಚಾರಕ್ಕೆಂದು ಹೆಲಿಕಾಪ್ಟರ್ ಮೂಲಕ ಕೂಡ್ಲಗಿಗೆ ಆಗಮಿಸಿದ್ದರು. ಹೆಲಿಕ್ಯಾಪ್ಟರ್ ನಿಂದ ಇಳಿದ ಕೂಡಲೇ ಮೊಬೈಲ್ ನಲ್ಲಿ ಬ್ಯೂಸಿ ಆದ ಸಿದ್ದರಾಮಯ್ಯ ಕಾರಿನ ಬಳಿ ಆಗಮಿಸಿದ್ದಾರೆ. ಇನ್ನೇನು ಕಾರಿನೊಳಗೆ ಕೂರಬೇಕೆನ್ನುವಷ್ಟರಲ್ಲಿ ಕಾರಿನ ಬಾಗಿಲ ಬಳಿಯೇ ಕುಸಿದು ಬಿದ್ದಿದ್ದಾರೆ.

ಸಿದ್ದರಾಮಯ್ಯ ಅವರು ಕುಸಿದು ಬೀಳುತ್ತಿದ್ದಂತೆ ಹಿಡಿದುಕೊಂಡ ವೈದ್ಯರು, ಬಳಿಕ ಕಾರಿನೊಳಗೆ ಕೂರಿಸಿ ಗ್ಲೂಕೋಸ್ ನೀಡಿದರು. ಗ್ಲೂಕೋಸ್ ಕುಡಿದ ಬಳಿಕ ಚೇತರಿಸಿಕೊಂಡ ಸಿದ್ದರಾಮಯ್ಯ ಜನರತ್ತ ಕೈ ಬೀಸಿ ಕಾರ್ಯಕ್ರಮಕ್ಕೆ ತೆರಳಲು ಸಿದ್ಧರಾದರು.

ಇನ್ನೂ ಈ ಬಗ್ಗೆ ಟ್ವೀಟ್‌ ಮೂಲಕ ಸ್ವತಃ ಸ್ಪಷ್ಟನೆ ನೀಡಿರುವ ಸಿದ್ದರಾಮಯ್ಯ ಅವರು, ದಿನನಿತ್ಯ ಓಡಾಡುವ ಕಾರು ಬದಲಾಗಿರುವ ಕಾರಣ ಸೈಡ್ ಸ್ಟೆಪ್ ಇಲ್ಲದೆ ಕಾಲು ಜಾರಿ ಹಿಂದಕ್ಕೆ ಬೀಳಲು ಆಗಿದ್ದೆ. ಗಾಬರಿ ಪಡುವಂತಹದ್ದೇನಿಲ್ಲ, ನಾನು ಆರೋಗ್ಯವಾಗಿದ್ದೇನೆ ಎಂದು ತಿಳಿಸಿದ್ದಾರೆ.