ಕಾರು ಹಾಗೂ ಕ್ಯಾಂಟರ್ ನಡುವೆ ಡಿಕ್ಕಿ- ಲೋಕೋಪಯೋಗಿ ಇಲಾಖೆ ಅಧಿಕಾರಿ ಸಾವು…

52
firstsuddi

ಹಾಸನ: ಕಾರು ಹಾಗೂ ಕ್ಯಾಂಟರ್ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಲೋಕೋಪಯೋಗಿ ಇಲಾಖೆ ಎಇಇ ಮೃತಪಟ್ಟಿರುವಂತಹ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಉದಯಪುರ ಬಳಿ ನಡೆದಿದೆ.

ಮೃತನನ್ನು 58 ವರ್ಷದ ಮೋಹನ್ ಕುಮಾರ್ ಎಂದು ಗುರುತಿಸಲಾಗಿದೆ. ಇವರು ಸಕಲೇಶಪುರದಲ್ಲಿ ಲೋಕೋಪಯೋಗಿ ಇಲಾಖೆ ಎಇಇ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.

ಅಪಘಾತದಲ್ಲಿ ಗಾಯಗೊಂಡಿದ್ದ ಮೋಹನ್​​ರನ್ನು ಹಾಸನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

ಘಟನೆ ಸಂಬಂಧ ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.