ಬೆಂಗಳೂರು : ಕಾರು ಹಾಗೂ ಟಿಪ್ಪರ್ ನಡುವೆ ಡಿಕ್ಕಿಯಾಗಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಆನೇಕಲ್ ತಾಲ್ಲೂಕಿನ ಅತ್ತಿಬೆಲೆ ಮತ್ತು ಸರ್ಜಾಪುರ ರಸ್ತೆಯಲ್ಲಿ ನಡೆದಿದೆ. ಅಂಜನಿ ಯಾದವ್(31), ನೇಹಾಯಾಧವ್(28), ಧ್ರುವ(2), ಶುಭ ಸಂತೋಷ್(29) ಮೃತ ದುರ್ದೈವಿಗಳು. ಮೃತರು ನಿನ್ನೆ ತಡರಾತ್ರಿ ಸ್ನೇಹಿತರೊಂದಿಗೆ ಊಟ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಎದುರಿಗೆ ಬಂದ ಟಿಪ್ಪರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದು, ಘಟನೆಯಲ್ಲಿ ಸಂತೋಷ್(29) ಹಾಗೂ ಮಗಳು ಸಾನ್ವಿ(2) ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಘಟನಾ ಸ್ಥಳಕ್ಕೆ ಸರ್ಜಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.










