ಉತ್ತರಪ್ರದೇಶ : ಕಾರು ಮತ್ತು ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ 7 ಮಂದಿ ಮೃತಪಟ್ಟಿರುವ ಘಟನೆ ಉತ್ತರಪ್ರದೇಶದ ಪುರಾನ್ಪುರ್ ಪ್ರದೇಶದಲ್ಲಿ ನಡೆದಿದೆ. ಲಖನೌನಿಂದ ಪಿಭಿತ್ ಗೆ ತೆರಳುತ್ತಿದ್ದ ಬಸ್ ಪುರಾನ್ಪುರ್ ಗಡಿ ಪ್ರದೇಶದಲ್ಲಿ ಕಾರಿಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಬಸ್ ಉರುಳಿ ಬಿದ್ದು 7 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಘಟನೆ ಸಂಭವಿಸುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು, ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.










