ಕಾರ್ಮಿಕರಿದ್ದ ಟ್ರ್ಯಾಕ್ಟರ್ ಪಲ್ಟಿ-15 ಮಂದಿಗೆ ಗಾಯ…

129
firstsuddi

ರಾಯಚೂರು : ಕಾರ್ಮಿಕರಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ 15 ಮಂದಿ ಗಾಯಗೊಂಡಿರುವ ಘಟನೆ ಜಿಲ್ಲೆ ಮಾನ್ವಿ ತಾಲ್ಲೂಕಿನ ರಬ್ಬಣಕಲ್ ಗ್ರಾಮದ ಬಳಿ ನಡೆದಿದೆ. 15 ಮಂದಿ ಕಾರ್ಮಿಕರು ಭತ್ತದ ನಾಟಿ ಮಾಡಲು ಟ್ರ್ಯಾಕ್ಟರ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ಟ್ರ್ಯಾಕ್ಟರ್ ಚಾಲಕನ ಅಜಾಗರೂಕತೆಯಿಂದ ಟ್ರ್ಯಾಕ್ಟರ್ ಪಲ್ಟಿಯಾಗಿದ್ದು, ಪರಿಣಾಮ 15 ಮಂದಿ ಕಾರ್ಮಿಕರು ಗಾಯಗೊಂಡಿದ್ದಾರೆ. ಅವರಲ್ಲಿ 8 ಮಂದಿ ಕಾರ್ಮಿಕರನ್ನು ಮಾನ್ವಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡ 7 ಮಂದಿ ಕಾರ್ಮಿಕರನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.