ಕಾರ್ಮಿಕರ ರಾಷ್ಟ್ರೀಯ ಸಂಘಟನೆಗಳ ಪ್ರತಿಭಟನೆಗೆ ತಮ್ಮ ಬೆಂಬಲವಿಲ್ಲ : ಜಯರಾಂ ಸಜಿತ್. 

78
firstsuddi

ಚಿಕ್ಕಮಗಳೂರು : ಕಾರ್ಮಿಕರ ರಾಷ್ಟ್ರೀಯ ಸಂಘಟನೆಗಳು ರಾಜ್ಯ ಸರ್ಕಾರ ಮತ್ತು ಕಾರ್ಮಿಕ ಸಚಿವರ ವಿರುದ್ದ ಜು.14 ರಂದು ಹಮ್ಮಿಕೊಂಡಿರುವ ಪ್ರತಿಭಟನೆಗೆ ತನ್ನ ಬೆಂಬಲವಿಲ್ಲ ಎಂದು ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾರ್ಮಿಕರ ಒಕ್ಕೂಟದ ಜಿಲ್ಲಾ ಘಟಕ ಹೇಳಿದೆ.

ಹಿಂದಿನ ಯಾವುದೇ ಕಾರ್ಮಿಕ ಸಚಿವರು ಮಾಡದಷ್ಟು ಅಭಿವೃದ್ದಿ ಕಾರ್ಯಗಳನ್ನು ಈಗಿನ ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಮಾಡಿದ್ದಾರೆ. ರಾಜ್ಯಾದ್ಯಂತ 28 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ನೋಂದಣಿ ಮಾಡಿದ್ದಾರೆ ಎಂದು ಒಕ್ಕೂಟದ ಜಿಲ್ಲಾಧ್ಯಕ್ಷ ಎಂ.ಎಂ.ಜಯರಾಂ ಸಜಿತ್  ತಿಳಿಸಿದ್ದಾರೆ.

ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಅವರು ಖುದ್ದು ಆಸಕ್ತಿ ವಹಿಸಿ ಕಾರ್ಮಿಕ ಸಮುದಾಯಕ್ಕೆ ಹೆಚ್ಚಿನ ಸೌಲಭ್ಯ ಸವಲತ್ತುಗಳನ್ನು ಒದಗಿಸಿ ಕೊಟ್ಟಿದ್ದಾರೆ, ಕಾರ್ಮಿಕರ ಮಕ್ಕಳಿಗೆ ನೀಡಲಾಗುವ ಶೈಕ್ಷಣಿಕ ದನಸಹಾಯದ ಮೊತ್ತವನ್ನು ಹೆಚ್ಚಿಸಿದ್ದಾರೆ ಎಂದಿದ್ದಾರೆ.

ನೋಂದಣಿಯಾಗಿರುವ ಕಾರ್ಮಿಕರಿಗೆ ಮತ್ತು ಅವರ ಕುಟುಂಬಕ್ಕೆ ಆರೋಗ್ಯ ತಪಾಸಣೆ ಬೆಂಗಳೂರು ನಗರದ ಕಾರ್ಮಿಕರಿಗೆ ಬಸ್ ಪಾಸ್ ಸೌಲಭ್ಯ ಒದಗಿಸುವ ಮೂಲಕ ಕಾರ್ಮಿಕರ ಹತ್ತು ಹಲವು ಸಮಸ್ಯೆಗಳಿಗೆ ಸಚಿವರು ಪ್ರಾಮಾಣಿಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿಸಿದ್ದಾರೆ.

ರಾಷ್ಟ್ರೀಯ ಸಂಘಟನೆಗಳು ಕಾರ್ಮಿಕ ಸಚಿವರನ್ನು ಖುದ್ದಾಗಿ ಭೇಟಿ ಮಾಡಿ ತಮ್ಮ ಬೇಡಿಕೆಗಳನ್ನು ತಿಳಿಸಿ ಪರಿಹರಿಸಿಕೊಳ್ಳುವ ಬದಲು ರಾಜಕೀಯ ಉದ್ದೇಶಕ್ಕಾಗಿ ಪ್ರತಿಭಟನೆ ಹಮ್ಮಿಕೊಂಡಿವೆ ಎಂದಿರುವ ಜಯರಾಂ ಹಾಗಾಗಿ ತಮ್ಮ ಸಂಘಟನೆ ಮುಷ್ಕರಕ್ಕೆ ಬೆಂಬಲ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.