ಕಾಲುವೆಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು…

204
firstsuddi

ರಾಯಚೂರು : ಕಾಲುವೆಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲಾಗಿರುವ ಘಟನೆ ಜಿಲ್ಲೆಯ ಮಸ್ಕಿ ತಾಲ್ಲೂಕಿನ ಶಂಕರನಗರ ಕ್ಯಾಂಪ್ ಬಳಿಯ ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ನಡೆದಿದೆ. ದಯಾ(19) ಹಾಗೂ ಶಿವು(18) ಮೃತ ಯುವಕರು ಎಂದು ಗುರುತಿಸಲಾಗಿದೆ. ಹೈದರಾಬಾದ್ ಮೂಲದ ಮೃತ ಯುವಕರು ಈಜಲು ತುಂಗಭದ್ರಾ ಎಡದಂಡೆ ಕಾಲುವೆಗೆ ಇಳಿದಿದ್ದು, ಬಳಿಕ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕ ದಳ ಸಿಬ್ಬಂದಿಗಳು ಮೃತದೇಹಕ್ಕಾಗಿ ಶೋಧರ್ಕಾ ನಡೆಸುತ್ತಿದ್ದು, ಮಸ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.