ಕಾಲೇಜಿನ ಗೇಟ್ ಬಿದ್ದು 10 ವರ್ಷದ ಬಾಲಕ ದುರ್ಮರಣ…

101
firstsuddi

ಚಿಕ್ಕೋಡಿ : ಕಾಲೇಜಿನ ಕಾಂಪೌಂಡ್ ಗೆ ಅಳವಡಿಸಿದ್ದ ಮುಖ್ಯ ಗೇಟ್ ಬಿದ್ದು ಬಾಲಕ ಮೃತಪಟ್ಟಿರುವ ಘಟನೆ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ನಡೆದಿದೆ.

ಪಟ್ಟಣದ ಇಂದ್ರಾ ನಗರ ನಿವಾಸಿ ಸುಫೀಯಾನ ರಾಜು ಮುಲ್ಲಾ (10) ಮೃತ ಬಾಲಕ. ನಗರದ ಆರ್.ಡಿ.ಕಾಲೇಜಿನ  ಗೇಟ್ ಮುಂದೆ ಸುಫೀಯಾನ ರಾಜು ಮುಲ್ಲಾ ಆಟವಾಡುತ್ತಿರುವಾಗ ರಭಸದ ಗಾಳಿಗೆ ಗೇಟ್ ಆತನ ಮೈಮೇಲೆ ಬಿದ್ದಿದೆ. ಪರಿಣಾಮ ಬಾಲಕ ಸೂಫಿಯಾನ್ ರಾಜು ಮುಲ್ಲಾ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸರಿಯಾಗಿ ಜೋಡಣೆ ಮಾಡದ ಕಾರಣ ಮಳೆಯಲ್ಲಿ ಶಿಥೀಲಗೊಂಡಿದ್ದ ಗೇಟ್ ಬಿದ್ದಿದೆ ಎಂದು ಹೇಳಲಾಗುತ್ತಿದೆ.

ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಸ್ಥಳಕ್ಕೆ ಚಿಕ್ಕೋಡಿ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.