ಕಾಲೇಜಿನ 2ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ…

81
firstsuddi

ಬೆಂಗಳೂರು : ಕಾಲೇಜಿನ ಎರಡನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಯತ್ನಿಸಿರುವ ಘಟನೆ ನಗರದಲ್ಲಿ ನಡೆದಿದೆ.

ಮೀನಾ (19) ಆತ್ಮಹತ್ಯೆ ಯತ್ನಿಸಿದ ವಿದ್ಯಾರ್ಥಿನಿ. ಜೀವನಭೀಮಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಬಿಎ ವ್ಯಾಸಂಗ ಮಾಡುತ್ತಿದ್ದ ಮೀನಾ ತನ್ನ ಅಕ್ಕನ ಮನೆಯಲ್ಲಿ ವಾಸವಾಗಿದ್ದಳು. ನಿನ್ನೆ ಅಕ್ಕನ ಜೊತೆ ಕೌಟುಂಬಿಕ ಕಾರಣಕ್ಕಾಗಿ ಗಲಾಟೆ ಮಾಡಿಕೊಂಡಿದ್ದಳು. ಇದರಿಂದ ಮನನೊಂದ ವಿದ್ಯಾರ್ಥಿನಿ ಇಂದು ಕಾಲೇಜಿನಲ್ಲಿ ಪ್ರಾರ್ಥನೆ ನಡೆಯುವಾಗ ಕಾಲೇಜಿನ ಎರಡನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎನ್ನಲಾಗಿದೆ.

2ನೇ ಮಹಡಿಯಿಂದ ಬಿದ್ದ ಪರಿಣಾಮ ವಿದ್ಯಾರ್ಥಿನಿ ಕಾಲು ಹಾಗೂ ತಲೆ ಭಾಗಕ್ಕೆ ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಜೀವನ್ ಭೀಮಾನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.