ಶಿವಮೊಗ್ಗ: ಜಿಲ್ಲೆಯ ಶರಾವತಿ ನಗರದಲ್ಲಿರುವ ಆದಿಚುಂಚನಗಿರಿ ಕಾಲೇಜು ಕಟ್ಟಡದ ಮೇಲಿಂದ ಬಿದ್ದು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಮೇಘಾಶ್ರೀ(18) ಮೃತ ವಿದ್ಯಾರ್ಥಿನಿ. ಈಕೆ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ಮೇಘಾಶ್ರೀ ಹೋಮ್ ಸಿಕ್ಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಇತ್ತ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೇಘಾಶ್ರೀ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಈ ಕುರಿತು ದೊಡ್ಡಪೇಟೆ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.










