ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ನಾಲ್ವರು ದುರಂತ ಸಾವು…

42
firstsuddi

ಮಂಡ್ಯ: ಕಾವೇರಿ ನದಿಗೆ ಈಜಾಡಲು ಹೋಗಿ ನಾಲ್ವರು ಮೃತಪಟ್ಟ ದುರ್ಘಟನೆ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿ ಬಳಿ ನಡೆದಿದೆ.

ಮೈಸೂರು ಮೂಲದ ನಾಗೇಶ್(40), ಭರತ್(17), ಗುರು(32), ಮಹದೇವ್(16) ಮೃತ ದುರ್ವೈವಿಗಳು. ಇವರು ಮೈಸೂರಿನ ಕನಕಗಿರಿಯಿಂದ ಮಳವಳ್ಳಿಯ ಮುತ್ತತ್ತಿಗೆ ಪ್ರವಾಸಕ್ಕೆ ಬಂದಿದ್ದರು. ಒಂದೇ ಬಸ್‌ನಲ್ಲಿ 40 ಜನ ಕುಟುಂಬಸ್ಥರು ಹಾಗೂ ಸ್ನೇಹಿತರು ಆಗಮಿಸಿದ್ದರು. ಬಿಸಲಿನ ತಾಪಕ್ಕೆ ತಂಪಾಗಲು ನದಿಯಲ್ಲಿ ಈಜಾಡಲು ತೆರಳಿದ್ದರು. ಈ ವೇಳೆ ನಾಲ್ವರು ಕಾವೇರಿ ನದಿಯಲ್ಲಿ ಈಜಾಡಲು ಹೋಗಿದ್ದು, ಓರ್ವ ನೀರಿನಲ್ಲಿ ಮುಳುಗಿದ್ದಾನೆ. ಈ ಹಿನ್ನೆಲೆಯಲ್ಲಿ ಆತನನ್ನು ರಕ್ಷಣೆ ಮಾಡಲು ಉಳಿದ ಮೂವರು ಹೋಗಿ ದುರಂತ ಅಂತ್ಯಕಂಡಿದ್ದಾರೆ.

ಸದ್ಯ ಇಬ್ಬರ ಮೃತದೇಹ ಪತ್ತೆಯಾಗಿದ್ದು, ಇನ್ನಿಬ್ಬರ ಮೃತದೇಹಕ್ಕಾಗಿ ಹುಡುಕಾಟ ನಡೆದಿದೆ. ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.