ಕಿಚ್ಚ ಸುದೀಪ್‍ಗೆ 50ನೇ ಹುಟ್ಟು ಹಬ್ಬದ ಸಂಭ್ರಮ -ನಂದಿ ಲಿಂಕ್ಸ್ ಗ್ರೌಂಡ್‍ನಲ್ಲಿ ಅಭಿಮಾನಿಗಳಿಂದ ಸೆಲಬ್ರೇಷನ್…

76
firstsuddi

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‍ಗೆ ಇಂದು 50ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮ. ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಸುದೀಪ್ ಅಭಿಮಾನಿಗಳ ಜೊತೆ ಆಚರಿಸಿಕೊಂಡಿದ್ದಾರೆ.

ಕಳೆದ ರಾತ್ರಿಯಿಂದಲೇ ಸಹಸ್ರ ಸಂಖ್ಯೆಯಲ್ಲಿ ಅಭಿಮಾನಿಗಳು ತಮ್ಮ ನೆಚ್ಚಿನ ನಟನನ್ನು ಕಣ್ತುಂಬಿಕೊಂಡು ಹುಟ್ಟುಹಬ್ಬದ ಶುಭಕೋರಲು ಬೆಂಗಳೂರಿಗೆ ಬರುತ್ತಿದ್ದಾರೆ. ಈ ಬಾರಿ ಕಿಚ್ಚ ಸುದೀಪ್ ತಮ್ಮ ಪತ್ನಿ ಪ್ರಿಯಾ, ಪುತ್ರಿ ಸೇರಿದಂತೆ ಕುಟುಂಬಸ್ಥರು, ಆಪ್ತರು, ಅಭಿಮಾನಿಗಳೊಂದಿಗೆ ಬೆಂಗಳೂರಿನ ನಂದಿ ಲಿಂಕ್ಸ್ ಗ್ರೌಂಡ್‍ನಲ್ಲಿ ಕೇಕ್ ಕತ್ತರಿಸುವ ಮೂಲಕ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರು.

ಡ್ರೋಣ್ ಲೈಟಿಂಗ್ ಮೂಲಕ ಪತ್ನಿ ಪ್ರಿಯಾ ಸ್ಪೆಷಲ್ ವಿಶ್ ಮಾಡಿದರು. ಇಂದು ಜೆಪಿ ನಗರದ ನಿವಾಸದಲ್ಲಿ ಅಭಿಮಾನಿಗಳ ಜೊತೆ ಕಿಚ್ಚ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ.

ಇತ್ತ ಸ್ಯಾಂಡಲ್‌ವುಡ್ ಹೀರೋ ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಕಿಚ್ಚನ ಹುಟ್ಟುಹಬ್ಬಕ್ಕೆ ಒಂದು ದಿನ ಮುಂಚಿತವಾಗಿ ಅವರ ಚಿತ್ರದ ಬಗ್ಗೆ ಬಿಗ್ ಅಪ್‌ಡೇಟ್ ಸಿಕ್ಕಿದೆ. ಸುದೀಪ್ ಮುಂದಿನ ಚಿತ್ರಕ್ಕೆ ಕೆಆರ್‌ಜಿ ನಿರ್ಮಾಣ ಸಂಸ್ಥೆ ಕೈಜೋಡಿಸಿದ್ದಾರೆ.

‘ಕಿಚ್ಚ 46’ ಸಿನಿಮಾದ ಟೈಟಲ್ ಘೋಷಣೆ ಆಗಿದ್ದು, ಈ ಚಿತ್ರಕ್ಕೆ ‘ಮ್ಯಾಕ್ಸ್’ ಎಂದು ಶೀರ್ಷಿಕೆ ನೀಡಲಾಗಿದೆ. ಸಿನಿಮಾದ ಶೂಟಿಂಗ್ ಸದ್ಯ ಭರದಿಂದ ಸಾಗುತ್ತಿದೆ.