ಕಿಚ್ಚ ಸುದೀಪ್ ಗೆ ಬೆದರಿಕೆ ಪತ್ರ : ಪ್ರಕರಣ ದಾಖಲು…

55
firstsuddi

ಬೆಂಗಳೂರು : ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಅವರ ಖಾಸಗಿ ವಿಡಿಯೋ ಲೀಕ್ ಮಾಡುವುದಾಗಿ ಎರಡು ಬೆದರಿಕೆ ಪತ್ರ ಬಂದಿದೆ. ಈ ಕುರಿತು ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಈ ಪತ್ರವು ಸುದೀಪ್ ಅವರ ಮ್ಯಾನೇಜರ್ ಜಾಕ್ ಮಂಜುಗೆ ಸಿಕ್ಕಿದ್ದು, ಅದನ್ನು ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಜಾಕ್ ಮಂಜು ನೀಡಿದ ದೂರಿನನ್ವಯ ಪೊಲೀಸರು ಎಫ್.ಐ.ಆರ್ ದಾಖಲಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

ಸುದೀಪ್ ಅವರ ಖಾಸಗಿ ವಿಡಿಯೋ ವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡುವ ಬೆದರಿಕೆ ಹಾಕಲಾಗಿದೆ. ಜೊತೆಗೆ ಕೆಲ ಅವಾಚ್ಯ ಶಬ್ದಗಳನ್ನು ಸಹ ಲೆಟರ್ ನಲ್ಲಿ ದುಷ್ಕರ್ಮಿಗಳು ಬರೆದಿದ್ದಾರೆ ಎನ್ನಲಾಗುತ್ತಿದೆ. ಇದರಿಂದ ಸುದೀಪ್ ಗೆ ಮಾನಸಿಕ ಕಿರುಕುಳ ಉಂಟಾಗಿದ್ದು, ನಟನ ಘನತೆಗೆ ಧಕ್ಕೆ ತರಲು ಮಾಡಿರುವ ಸಂಚು ಎಂದು ಮಂಜುನಾಥ್ ಅವರು ದೂರಿದ್ದಾರೆ.

ಜಾಕ್ ಮಂಜು ನೀಡಿದ ದೂರನ್ನು ಆಧರಿಸಿ ಪೊಲೀಸರು ಐಪಿಸಿ ಸೆಕ್ಷನ್ 506, ಸೆಕ್ಷನ್ 504 ಅಡಿಯಲ್ಲಿ ಕೇಸ್ ದಾಖಲು ಮಾಡಿಕೊಂಡಿದ್ದಾರೆ. ಈ ಪತ್ರ ಬಂದಿರುವುದು ಎಲ್ಲಿಂದ? ಬರೆದವರು ಯಾರು ಎನ್ನುವುದರ ಕುರಿತು ಪೊಲೀಸರು ಹೆಚ್ಚಿನ ತನಿಖೆಯನ್ನೂ ನಡೆಸುತ್ತಿದ್ದಾರೆ. ಸುದೀಪ್ ಅವರು ಬಿಜೆಪಿಗೆ ಸೇರುತ್ತಿದ್ದಾರೆ ಎಂಬ ವರದಿಗಳು ಬಂದ ಹಿನ್ನೆಲೆಯಲ್ಲಿ ಈ ಬೆದರಿಕೆ ಪತ್ರ ಬಂದಿದೆ ಎಂದು ಹೇಳಲಾಗುತ್ತಿದೆ.