ಕಿಚ್ಚ ಸುದೀಪ್ ನಿವಾಸಕ್ಕೆ ಡಿ.ಕೆ ಶಿವಕುಮಾರ್ ಭೇಟಿ…

80
firstsuddi

ಕರ್ನಾಟಕ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಿಚ್ಚ ಸುದೀಪ್ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಈ ಭೇಟಿ ಸಾಕಷ್ಟು ಕುತೂಹಲ ಮೂಡಿಸಿದೆ.

ಕಿಚ್ಚ ಸುದೀಪ್ ಅವರು ಕಾಂಗ್ರೆಸ್ ಗೆ ಸೇರ್ಪಡೆ ಆಗುತ್ತಾರೆ ಎನ್ನುವ ವಿಚಾರ ಕೆಲ ದಿನಗಳಿಂದ ಚರ್ಚೆಯಲ್ಲಿದೆ. ಆದರೆ, ಈ ಬಗ್ಗೆ ಸ್ಪಷ್ಟನೆ ಸಿಕ್ಕಿಲ್ಲ. ಈ ಬೆನ್ನಲ್ಲೇ ಡಿಕೆಶಿ ಅವರನ್ನು ಭೇಟಿ ಮಾಡಿದ್ದಾರೆ.

ಡಿಕೆ ಶಿವಕುಮಾರ್, ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮೊಹಮದ್ ನಲಪಾಡ್ ಹಾಗೂ ಸುದೀಪ್ ಒಟ್ಟಿಗೆ ಇರುವ ಫೋಟೋ ವೈರಲ್ ಆಗಿದೆ. ಡಿಕೆಶಿ ಒಡೆತನದ ಮಾಲ್ ವೊಂದರಲ್ಲಿ ಮಲ್ಟಿಪ್ಲೆಕ್ಸ್ ಚಿತ್ರಮಂದಿರದ ಉದ್ಘಾಟನೆಗೆ ಸುದೀಪ್ ಅವರನ್ನು ಆಹ್ವಾನಿಸಲು ಹೋಗಿದ್ದರು ಎಂದು ಹೇಳಲಾಗುತ್ತಿದೆ.

ಇನ್ನು ನಟ ಕಿಚ್ಚ ಸುದೀಪ್ ಕಾಂಗ್ರೆಸ್ ಪಕ್ಷಕ್ಕೆ ಬರುವುದಾದರೆ ಸ್ವಾಗತಿಸುತ್ತೇನೆ ಎಂದು ಕರ್ನಾಟಕ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸುದೀಪ್ ಅವರು ಹೆಸರಾಂತ ನಟ. ಸಮಾಜದ ಬಗ್ಗೆ ಕಾಳಜಿ ಇರುವಂತವರು. ಅವರು ನಮ್ಮ ಪಕ್ಷಕ್ಕೆ ಬಂದರೆ ಸ್ವಾಗತಿಸುತ್ತೇವೆ ಎಂದು ತಿಳಿಸಿದ್ದಾರೆ.