ಹುಬ್ಬಳ್ಳಿ : ಕೋವಿಡ್ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧನೋರ್ವ ನೇಣಿಗೆ ಶರಣಾಗಿರುವ ಘಟನೆ ಕಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ.
ಮೃತ ವ್ಯಕ್ತಿ ನಗರದ ರಣದಮ್ಮ ಕಾಲನಿಯ ನಿವಾಸಿಯಾಗಿದ್ದು, ಸುಮಾರು 78 ವಯಸ್ಸಿನವರಾಗಿದ್ದಾರೆ ಎನ್ನಲಾಗಿದೆ. ಕೊರೊನಾ ಸೋಂಕು ದೃಢಪಟ್ಟ ಹಿನ್ನಲೆ ಕಿಮ್ಸ್ ಗೆ ದಾಖಲಾಗಿದ್ದರು. ನಿನ್ನೆ ಮಧ್ಯರಾತ್ರಿ ಕೋವಿಡ್ ವಾರ್ಡ್ ನಂ.303 ರ ಬಾತ್ ರೂಂನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾಗಿದ್ದಾರೆ. ಕೋವಿಡ್ ದೃಡಪಟ್ಟ ಹಿನ್ನೆಲೆಯಲ್ಲಿ ಮಾನಸಿಕವಾಗಿ ಕುಗ್ಗಿ ಹೋದ ಪರಿಣಾಮ ವೃದ್ದ ನೇಣು ಬಿಗಿದುಕೊಂಡಿರಬಹುದೆಂದು ಶಂಕೆ ವ್ಯಕ್ತಪಡಿಸಲಾಗಿದೆ.
ಘಟನೆಯ ವಿಷಯ ತಿಳಿಯುತ್ತಿದ್ದಂತೆ ವಿದ್ಯಾನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.










