ಕುಂದಗೋಳ ಕ್ಷೇತ್ರದ ಉಪಚುನಾವಣೆಯ ಮೈತ್ರಿ ಅಭ್ಯರ್ಥಿಯಾಗಿ ಕುಸುಮಾ ಶಿವಳ್ಳಿ ನಾಮಪತ್ರ ಸಲ್ಲಿಕೆ…

569
firstsuddi

ಹುಬ್ಬಳ್ಳಿ : ಕುಂದಗೋಳ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆ ಇಂದು ಪೌರಾಡಳಿತ ಸಚಿವ ದಿವಂಗತ ಶಿವಳ್ಳಿ ಅವರ ಪತ್ನಿ ಕುಸುಮಾ ಶಿವಳ್ಳಿ ಅವರು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕುಂದಗೋಳ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರವನ್ನು ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸುವುದಕ್ಕೂ ಮೊದಲು ವಿವಿಧ ದೇವಾಲಯಗಳಿಗೆ ಭೇಟಿ ನೀಡಿದ್ದು, ನಗರದ ಸಿದ್ಧರೂಡ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ. ಈ ವೇಳೆ ಸ್ಥಳೀಯ ಕಾಂಗ್ರೆಸ್ ಪಕ್ಷದ ಮುಖಂಡರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಭಾಗಿಯಾಗಿದ್ದು, ಈ ಸಂದರ್ಭದಲ್ಲಿ ಅಭಿಮಾನಿಯೊಬ್ಬರು ತಮ್ಮ ಅಭ್ಯರ್ಥಿ ಕುಸುಮಾ ಶಿವಳ್ಳಿ ಅವರು ಗೆಲ್ಲಬೇಕೆಂದು ಮುಂಜಾನೆ ಮೂರು ಗಂಟೆಗೆ ತಮ್ಮ ಗ್ರಾಮದಿಂದ ಆರಂಭಿಸಿ ಕುಂದಗೋಳದವರೆಗೂ ರಸ್ತೆಯಲ್ಲಿ 12 ಕಿಲೋ ಮೀಟರ್ ಉರುಳು ಸೇವೆ ಮಾಡಿದ್ದಾರೆ.