ಕುಂದಾನಗರಿಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ – 22 ಶಾಲೆಗಳಿಗೆ ರಜೆ ಘೋಷಣೆ…

49
firstsuddi

ಬೆಳಗಾವಿ : ಜಿಲ್ಲೆಯಲ್ಲಿ ಚಿರತೆ ಮತ್ತೆ ಪ್ರತ್ಯಕ್ಷವಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಬೆಳಗಾವಿ ನಗರ ಮತ್ತು ಗ್ರಾಮೀಣ ಭಾಗದ ವ್ಯಾಪ್ತಿಯಲ್ಲಿರುವ 22 ಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.

ನಗರದ ಹಿಂಡಲಗಾ ರಸ್ತೆಯ ವನಿತಾ ವಿದ್ಯಾಲಯ ಬಳಿಯ ಡಬಲ್ ರಸ್ತೆಯಲ್ಲಿ ಇಂದು ಬೆಳಗಿನ ಜಾವ ಚಿರತೆ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಇಂದು ಬೆಳಗಾವಿ ನಗರ ಮತ್ತು ಗ್ರಾಮೀಣ ವಲಯ ವ್ಯಾಪ್ತಿಯಲ್ಲಿನ 22 ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ ಎಂದು ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಸವರಾಜ ನಾಲತವಾಡ ತಿಳಿಸಿದ್ದಾರೆ.

ಆಗಸ್ಟ್ 5 ರಂದು ಜಿಲ್ಲೆಯ ಜಾಧವ್ ನಗರದಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಕಟ್ಟಡ ಕಾರ್ಮಿಕ ಸಿದರಾಯಿ ಮಿರಜಕರ್ ಎಂಬುವವರ ಮೇಲೆ ದಾಳಿ ಮಾಡಿ ನಾಪತ್ತೆ ಆಗಿತ್ತು. ಕಳೆದ 18 ದಿನಗಳಿಂದ ಚಿರತೆ ಸೆರೆಗೆ ಅರಣ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆ ಜಂಟಿಯಾಗಿ ಕಾರ್ಯಾಚರಣೆ ಮಾಡುತ್ತಿದ್ದಾರೆ.