ಕುಂದಾಪುರದಲ್ಲಿ ಫೈನಾನ್ಸ್ ಮಾಲೀಕನ ಬರ್ಬರ ಹತ್ಯೆ…

106
firstsuddi

ಉಡುಪಿ : ಡ್ರೀಮ್ ಫೈನಾನ್ಸ್ ನ ಫೈನಾನ್ಶಿಯರ್ ನನ್ನು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿರುವ ಘಟನೆ ಕುಂದಾಪುರದ ತಾಲೂಕಿನ ಕಂಡ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಸಳ್ವಾಡಿಯಲ್ಲಿ ನಿನ್ನೆ ತಡರಾತ್ರಿ ಈ ಘಟನೆ ನಡೆದಿದ್ದು, ಮೃತ ವ್ಯಕ್ತಿಯನ್ನು ಯಡಾಡಿ ಮತ್ಯಾಡಿ  ಕೂಡಲ್ ನಿವಾಸಿ ಅಜೇಂದ್ರ ಶೆಟ್ಟಿ (33) ಎಂದು ಗುರುತಿಸಲಾಗಿದೆ.

ಅಜೇಂದ್ರ ಶೆಟ್ಟಿ ತಡರಾತ್ರಿಯವರೆಗೆ ಮನೆಗೆ ವಾಪಾಸ್ಸಾಗಿರಲಿಲ್ಲ. ಮನೆಯವರು ಹುಡುಕಾಟ ಆರಂಭಿಸಿದ್ದಾರೆ. ಎಲ್ಲೂ ಕೂಡ ಕಾಣಿಸದಿದ್ದಾಗ ಆತನ ಸ್ನೇಹಿತರು ಫೈನಾನ್ಸ್ ಗೆ ಹೋಗಿ ನೋಡಿದಾಗ ಬರ್ಬರವಾಗಿ ಕೊಲೆಯಾದ ಸ್ಥಿತಿಯಲ್ಲಿ ಅಜೇಂದ್ರ ಪತ್ತೆಯಾಗಿದ್ದಾರೆ. ಹಣಕಾಸು ವಿಚಾರಕ್ಕೆ ಕೊಲೆಯಾಗಿರಬಹುದು ಎಂದು ಮೇಲ್ನೋಟಕ್ಕೆ ಅಂದಾಜಿಸಲಾಗಿದೆ. ಕೊಲೆಗೆ ನಿಖರ ಕಾರಣ ಏನು ಎಂಬುದು ಪೊಲೀಸರ ತನಿಖೆಯಿಂದ ತಿಳಿದುಬರಬೇಕಾಗಿದೆ.

ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.