ಕುಂದಾಪುರದಲ್ಲಿ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಕೊಠಡಿ…

83
firstsuddi

ಉಡುಪಿ : ಕುಂದಾಪುರ ಸರ್ಕಾರಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ಮತ್ತೆ ಹಿಜಾಬ್ ತೊಟ್ಟು ಕಾಲೇಜಿಗೆ ಬಂದಿದ್ದಾರೆ. ಪ್ರಾಂಶುಪಾಲರು ಮುಸ್ಲಿಂ ವಿದ್ಯಾರ್ಥಿನಿಯರಿಗೆ ಸ್ಕಾರ್ಫ್ ತೆಗೆದು ಕ್ಲಾಸಿನಲ್ಲಿ ಕುಳಿತುಕೊಳ್ಳುವಂತೆ ಮನವಿ ಮಾಡಿದ್ದಾರೆ. ಆದರೆ ವಿದ್ಯಾರ್ಥಿನಿಯರು, ನಾವು ಹಿಜಾಬ್ ತೆಗೆಯಲ್ಲ, ನಮಗೆ ನಮ್ಮ ಮನೆಯಲ್ಲಿ ಹೇಳಿದ್ದಾರೆ ಎಂದಿದ್ದಾರೆ. ಹೀಗಾಗಿ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರಿಗೆ ತರಗತಿಗೆ ಪ್ರವೇಶ ನೀಡಿಲ್ಲ ಬದಲಾಗಿ ಕುಳಿತುಕೊಳ್ಳಲು ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ.

ನಾಳೆ ಹೈಕೋರ್ಟ್ ಆರ್ಡರ್ ಬರಲಿದೆ. ನಮ್ಮ ಮುಂದಿನ ನಡೆ ಏನು ಎಂಬುದನ್ನು ಆಮೇಲೆ ನಿರ್ಧರಿಸುತ್ತೇವೆ ಎಂದು ಹಿಜಾಬ್ ತೊಟ್ಟು ಬಂದ ವಿದ್ಯಾರ್ಥಿನಿಯರು ಹೇಳಿದ್ದಾರೆ.