ಕುಂಭಮೇಳಕ್ಕೆ ರಾಜ್ಯದಿಂದ ಹೋಗಿ ಬಂದವರಿಗೆ ಕೊರೊನಾ ಪರೀಕ್ಷೆ ಕಡ್ಡಾಯ : ಸಚಿವ ಸುಧಾಕರ್.

117
firstsuddi

ಬೆಂಗಳೂರು : ಹರಿದ್ವಾರದಲ್ಲಿ ನಡೆಯುತ್ತಿರುವ ಪವಿತ್ರ ಕುಂಭಮೇಳದಲ್ಲಿ ರಾಜ್ಯದಿಂದಲೂ ಸಾವಿರಾರೂ ಭಕ್ತರು ತೆರಳಿದ್ದಾರೆ. ಕುಂಭಮೇಳದಲ್ಲಿ ಪಾಲ್ಗೊಂಡು ರಾಜ್ಯಕ್ಕೆ ಬರುವವರು ಕಡ್ಡಾಯವಾಗಿ ಕೊರೊನಾ ಪರೀಕ್ಷೆಗೆ ಒಳಪಡಬೇಕು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಆರೋಗ್ಯ ಸಚಿವ ಡಾ.ಸುಧಾಕರ್, ಹರಿದ್ವಾರದಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಭಾರೀ ಸಂಖ್ಯೆಯಲ್ಲಿ ಭಕ್ತಾಧಿಗಳು ಸೇರಿದ್ದರು. ಈ ವೇಳೆ ಕೋವಿಡ್ ನಿಯಮಗಳ ಸಂಪೂರ್ಣ ಉಲ್ಲಂಘನೆಯಾಗಿರುವುದು ಕಂಡು ಬಂದಿದ್ದು, ಆತಂಕ ಹೆಚ್ಚಾಗುವಂತೆ ಮಾಡಿದೆ. ಕುಂಭಮೇಳದಲ್ಲಿ ಪಾಲ್ಗೊಂಡು ರಾಜ್ಯಕ್ಕೆ ಮರಳುವ ಯಾತ್ರಿಗಳು ವಾಪಸ್ಸಾದ ಬಳಿಕ ಕಡ್ಡಾಯವಾಗಿ ತಮ್ಮ ಮನೆಗಳಲ್ಲಿ ಪ್ರತ್ಯೇಕಗೊಂಡು ಕೊರೊನಾ ಪರೀಕ್ಷೆಗೆ ಒಳಪಡಬೇಕು. ಕೊರೊನಾ ಪರೀಕ್ಷೆ ವರದಿಯಲ್ಲಿ ನೆಗೆಟಿವ್ ಬಂದ ನಂತರವಷ್ಟೆ ಯಾತ್ರಿಕರು ತಮ್ಮ ಎಂದಿನ ಕಾರ್ಯಗಳಲ್ಲಿ ತೊಡಗಬೇಕೆಂದು ಮನವಿ ಮಾಡಿದ್ದಾರೆ.