ಶಿವಮೊಗ್ಗ : ಮಂಗಳೂರಿನಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ತೀರ್ಥಹಳ್ಳಿಯ ಸೊಪ್ಪುಗಡ್ಡೆಯಲ್ಲಿರುವ ಆರೋಪಿ ಶಾರೀಕ್ ನಿವಾಸ ಹಾಗೂ ಶಾರೀಕ್ ಸಂಬಂಧಿಕರ ನಿವಾಸದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಇಲ್ಲಿವರೆಗೂ ಒಟ್ಟು 4 ಮನೆಗಳ ಮೇಲೆ ದಾಳಿ ಪೊಲೀಸರು ದಾಳಿ ನಡೆಸಿದ್ದಾರೆ.
ನ.19ರಂದು ಗರೋಡಿ ಸಮೀಪದ ರಸ್ತೆಯಲ್ಲಿ ಸಂಚರಿಸುತ್ತಿದ್ದ ರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟವಾಗಿತ್ತು. ಚಾಲಕ ಪುರುಷೋತ್ತಮ್ ಮತ್ತು ಆರೋಪಿ ಶಾರೀಕ್ ಗಾಯಗೊಂಡಿದ್ದರು. ಸದ್ಯ ಇಬ್ಬರನ್ನು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಆರೋಪಿ ಮುಖ ವಿರೂಪಗೊಂಡಿದ್ದು, ಗುರುತಿಸಲು ಪೊಲೀಸರಿಗೆ ಸಾಧ್ಯವಾಗಿಲ್ಲ. ಹೀಗಾಗಿ ಆರೋಪಿ ಶಾರೀಕ್ ಗುರುತು ಪತ್ತೆ ಹಚ್ಚಲು ಶಿವಮೊಗ್ಗದಿಂದ ಮಂಗಳೂರಿಗೆ ಆತನ ಪೋಷಕರನ್ನು ಪೊಲೀಸರು ಕರೆತಂದಿದ್ದಾರೆ.










