ಕುಕ್ಕರ್ ಬಾಂಬ್ ಸ್ಫೋಟ ಬೆನ್ನಲ್ಲೇ ಮಂಗಳೂರಿನ ಬಸ್ ನಿಲ್ದಾಣದಲ್ಲಿ ಆತಂಕ ಸೃಷ್ಟಿಸಿದ ಬ್ಯಾಗ್…

69
firstsuddi

ಮಂಗಳೂರು: ನಗರದಲ್ಲಿ ಕುಕ್ಕರ್ ಬಾಂಬ್ ಸ್ಫೋಟದ ಬೆನ್ನಲ್ಲೇ ಇಂದು ನಗರದ ಕೆಎಸ್‍ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್ ವೊಂದು ಆತಂಕ ಸೃಷ್ಟಿಸಿದ ಘಟನೆ ನಡೆದಿದೆ.

ಬಿಜೈನಲ್ಲಿರುವ ಕೆಎಸ್‍ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್ ಕಂಡುಬಂದಿತ್ತು. ಈ ಬಗ್ಗೆ ಸ್ಥಳೀಯರು ಮಾಹಿತಿ ನೀಡುತ್ತಿದ್ದಂತೆ ಕೂಡಲೇ ಸ್ಥಳಕ್ಕೆ ಬಾಂಬ್ ಸ್ಕ್ವಾಡ್, ಶ್ವಾನದಳ ಆಗಮಿಸಿ ಪರಿಶೀಲನೆ ನಡೆಸಿತು. ಈ ವೇಳೆ ಬ್ಯಾಗ್ ನಲ್ಲಿ ಯಾವುದೇ ಸ್ಫೋಟಕ ವಸ್ತುಗಳ ಪತ್ತೆಯಾಗಲಿಲ್ಲ. ಬಳಿಕ ಬ್ಯಾಗ್ ನ ವಾರಸುದಾರರು ಪತ್ತೆಯಾಗಿದ್ದು, ಬಸ್ ಪ್ರಯಾಣಿಕರೊಬ್ಬರು ನಿಲ್ದಾಣದಲ್ಲಿ ಇಟ್ಟು ಹೋಗಿದ್ದರು ಎಂದು ತಿಳಿದಿದೆ. ಈ ವಿಷಯ ತಿಳಿಯುತ್ತಿದ್ದಂತೆ ಬಸ್ ನಿಲ್ದಾಣದಲ್ಲಿದ್ದವರು ನಿರಾಳರಾದರು.

ನ.19 ರಂದು ನಗರದ ಗರೋಡಿಯಲ್ಲಿ ಆಟೋ ರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟವಾಗಿತ್ತು. ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ತೀರ್ಥಹಳ್ಳಿಯ ಶಾರೀಕ್ ಎಂಬಾತ ಪೊಲೀಸ್ ವಶದಲ್ಲಿದ್ದಾನೆ.