ಕುಖ್ಯಾತ ರೌಡಿ ಉಮ್ಮರ್ ಫಾರೂಕ್ ಮೇಲೆ ಪೊಲೀಸರಿಂದ ಗುಂಡು; ಬಂಧನ…

206
firstsuddi

ಮಂಗಳೂರು: ಬಂಧಿಸಲು ತೆರಳಿದ್ದ ವೇಳೆ ಪೊಲೀಸರಿಂದ, ಪೊಲೀಸರ ಮೇಲೆ ದಾಳಿ ನಡೆಸಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ ಕುಖ್ಯಾತ ರೌಡಿ ಮೇಲೆ ಗುಂಡು ಹಾರಿಸಿ ಬಂಧಿಸಿದ ಘಟನೆ ಮಂಗಳವಾರ ತಡರಾತ್ರಿ ನಗರದ ಪಚ್ಚನಾಡಿ ಬಳಿ ಸಂಭವಿಸಿದೆ. ಕುಖ್ಯಾತ ರೌಡಿ ಉಮ್ಮರ್ ಫಾರೂಕ್ 2 ಪ್ರಕರಣಗಳಲ್ಲಿ ಪೊಲೀಸರಿಂದ ತಪ್ಪಿಸಿಕೊಂಡು ಓಡಾಡುತ್ತಿದ್ದು ಮಂಗಳವಾರ ರಾತ್ರಿ ಕಂಕನಾಡಿ ಗ್ರಾಮಾಂತರ ಪೊಲೀಸರು ಆತನನ್ನು ಬಂಧಿಸಲು ಪ್ರಯತ್ನಿಸಿದ್ದ ವೇಳೆ ಪೊಲೀಸರ ಮೇಲೆ ಪ್ರತಿ ದಾಳಿ ನಡೆಸಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದ ವೇಳೆ ಆತ್ಮ ರಕ್ಷಣೆಗಾಗಿ ಆತನ ಮೇಲೆ ಗುಂಡು ಹಾರಿಸಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆಯಲ್ಲಿ ಪೊಲೀಸ್ ಪೇದೆ ಸಂದೀಪ್ ಎನ್ನುವವರು ಗಾಯಗೊಂಡಿದ್ದು, ಉಮ್ಮರ್ ಕೂಡ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಇಬ್ಬರನ್ನು ಕೂಡ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಮೀರ್ ಟಾರ್ಗೆಟ್ ಗ್ರೂಪ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯಾಗಿದ್ದು ಈ ಪ್ರಕರಣದಲ್ಲಿ ಉಮ್ಮರ್ ಫಾರೂಕ್ ಕೂಡ ಪ್ರಮುಖ ಆರೋಪಿಯಾಗಿದ್ದು ಪೊಲೀಸರಿಗೆ ಬೇಕಾಗಿದ್ದ ಎನ್ನಲಾಗಿದೆ.