ದಾವಣಗೆರೆ : ಸಚಿವ ಕೆ.ಎಸ್ ಈಶ್ವರಪ್ಪನವರು ಜಿಲ್ಲೆಯ ಜಗಳೂರು ತಾಲ್ಲೂಕಿನಲ್ಲಿರುವ ಕಣ್ವಕುಪ್ಪೆ ಮಠಕ್ಕೆ ಪತ್ನಿ ಹಾಗೂ ಪುತ್ರ ಕಾಂತೇಶ್ ಜೊತೆ ಕುಟುಂಬ ಸಮೇತರಾಗಿ ಭೇಟಿ ನೀಡಿದ್ದು, ನಾಲ್ವಡಿ ಶಾಂತಲಿಂಗ ಶಿವಾಚಾರ್ಯ ಸ್ವಾಮಿಜಿ ಆಶೀರ್ವಾದ ಪಡೆದಿದ್ದಾರೆ.
ಕಣ್ವಕುಪ್ಪೆ ಮಠಕ್ಕೆ ಭೇಟಿ ನೀಡಿದ ಈಶ್ವರಪ್ಪನವರು ನಾಲ್ವಡಿ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಜೊತೆ ಸುಮಾರು ಒಂದು ಗಂಟೆಯ ಕಾಲ ಚರ್ಚೆ ನಡೆಸಿದ್ದಾರೆ. ನಾಲ್ವಡಿ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಕೇದರನಾಥ್ ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಧೀಕ್ಷೆ ನೀಡಿದ್ದ ಸ್ವಾಮೀಜಿಯಾಗಿದ್ದು, ರಾಷ್ಟ್ರ ನಾಯಕರ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದಾರೆ.
ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಯ ನಡುವೆಯೂ ಈಶ್ವರಪ್ಪನವರು ಕಣ್ವಕುಪ್ಪೆ ಮಠಕ್ಕೆ ಭೇಟಿ ನೀಡಿರುವುದು ಸಾಕಷ್ಟು ಕೂತುಹಲ ಕೆರಳಿಸಿದ್ದು, ಈ ಭೇಟಿ ಹಿಂದೆ ರಾಜಕೀಯ ಲೆಕ್ಕಾಚಾರ ಇದೆ ಎಂಬ ಹಲವು ಅನುಮಾನಗಳು ಹುಟ್ಟಿಕೊಂಡಿವೆ.










