ಕುಡಿದ ಮತ್ತಿನಲ್ಲಿ ಮಹಿಳೆಯರ ಮುಂದೆ ವ್ಯಕ್ತಿಯ ಅಸಭ್ಯ ವರ್ತನೆ!

147
firstsuddi

ಚಾಮರಾಜನಗರ : ನರೇಗಾ ಯೋಜನೆಯಡಿ ಕೆಲಸ ಮಾಡುತ್ತಿದ್ದ ಮಹಿಳೆಯರ ಮುಂದೆ ಪಾನಮತ್ತ ವ್ಯಕ್ತಿಯೊಬ್ಬ ಅಸಭ್ಯ ವರ್ತನೆ ಮಾಡಿದ ಘಟನೆ ತಾಲ್ಲೂಕಿನ ಪುಣಜನೂರು ಗ್ರಾಮದಲ್ಲಿ ನಿನ್ನೆ ನಡೆದಿದೆ.

ಪುಣಜನೂರು ಗ್ರಾಮದ ತಾಂಡವಮೂರ್ತಿ ಎಂಬ ವ್ಯಕ್ತಿ ಕುಡಿದ ಮತ್ತಿನಲ್ಲಿ ನರೇಗಾ ಯೋಜನೆಯಡಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಮಹಿಳೆಯರ ಜೊತೆ ಕ್ಷುಲ್ಲಕ ಕಾರಣಕ್ಕೆ ಜಗಳವಾಡಿ ಬಳಿಕ ಬೆತ್ತಲೆಯಾಗಿ ಅಸಭ್ಯ ವರ್ತನೆ ತೋರಿದ್ದಾನೆ. ಈತನ ರಂಪಾಟವನ್ನು ನೋಡಿದ ಸ್ಥಳೀಯರು ವೀಡಿಯೋ ಮಾಡಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಇದರಿಂದ ಕೋಪಗೊಂಡ ಆತನ ಮಕ್ಕಳಾದ ಮಹೇಂದ್ರ ಮತ್ತು ಸಂತೋಷ್ ಎಂಬವರು, ಗ್ರಾಮದ ಮೂವರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ.

ಸದ್ಯ ಮೂವರು ಗಾಯಾಳುಗಳು ಚಾಮರಾಜನಗರ ಜಿಲ್ಲಾಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಅಸಭ್ಯವಾಗಿ ವರ್ತಿಸಿದ ತಾಂಡವಮೂರ್ತಿ ಹಾಗೂ ಹಲ್ಲೆ ನಡೆಸಿದ ಆತನ ಮಕ್ಕಳನ್ನು ಪೊಲೀಸರು ಬಂಧಿಸಿದ್ದಾರೆ.

ಚಾಮರಾಜನಗರ ಪೂರ್ವ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.