ಮೈಸೂರು : ಕುಡಿಯುವ ನೀರಿನ ಟ್ಯಾಂಕರ್ ಗೆ ಕಿಡಿಗೇಡಿಗಳು ಕ್ರಿಮಿನಾಶಕ ಬೆರೆಸಿರುವ ಘಟನೆ ನಂಜನಗೂಡು ತಾಲ್ಲೂಕಿನ ಕುರಹಟ್ಟಿ ಗ್ರಾಮದಲ್ಲಿ ನಡೆದಿದೆ.
ಟ್ಯಾಂಕ್ ನಿಂದ ನಲ್ಲಿಗಳಿಗೆ ನೀರು ಬಿಟ್ಟಾಗ ನೀರಿನಲ್ಲಿ ಘಾಟಿನ ವಾಸನೆ ಬಂದಿದ್ದರಿಂದ ಜನರು ಪರಿಶೀಲನೆ ನಡೆಸಿದಾಗ ನೀರಿನಲ್ಲಿ ವಿಷ ಬೆರೆಸಿರುವ ವಿಚಾರ ಬೆಳಕಿಗೆ ಬಂದಿದೆ. ಗ್ರಾಮಸ್ಥರ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ. ಭತ್ತದ ಗದ್ದೆಗೆ ಸಿಂಪಡಿಸುವ ಕ್ರಿಮಿನಾಶಕ ಔಷಧಿಯನ್ನು ನೀರಿಗೆ ಬೆರೆಸಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಘಟನೆ ಸಂಬಂಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.










