ಮಂಗಳೂರು: ಮಂಗಳೂರು ದಸರಾ ಹಬ್ಬದ ಪ್ರಯುಕ್ತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರೂ ಹಾಗೂ ದಕ್ಷಿಣಕನ್ನಡ ಲೋಕಸಭಾ ಸದಸ್ಯರೂ ಆದ ಶ್ರೀ ನಳಿನ್ ಕುಮಾರ್ ಕಟೀಲ್ ಇವರು ಭೇಟಿ ನೀಡಿದರು. ಈ ಸಂದರ್ಭ ಹಿರಿಯ ರಾಜಕಾರಣಿ, ಮಂಗಳೂರು ದಸರದ ರೂವಾರಿ, ಮಾಜಿ ಕೇಂದ್ರ ಸಚಿವ ಶ್ರೀಯುತ ಜನಾರ್ಧನ ಪೂಜಾರಿ ಅವರನ್ನು ಭೇಟಿ ಮಾಡಿ ಕುಶಲೋಪರಿ ವಿಚಾರಿಸಿ, ಹಿರಿಯರ ಆಶೀರ್ವಾದ ಪಡೆದರು. ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ರವಿಶಂಕರ್ ಮಿಜಾರ್, ಹರಿಕೃಷ್ಣ ಬಂಟ್ವಾಳ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.










