ಕುಪ್ವಾರದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ, ಇಬ್ಬರು ಭಯೋತ್ಪಾದಕರ ಹತ್ಯೆ.

31

ಕುಪ್ವಾರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಯೋತ್ಪಾದಕರು ಒಳನುಸುಳುವಿಕೆ ಯತ್ನದ ನಡೆಸಿದ್ದಾರೆ ಎಂದು ಗುಪ್ತಚರ ಮಾಹಿತಿ ಬಂದಿದ್ದು, ಭಾರತೀಯ ಸೇನೆ ಹಾಗೂ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಕುಪ್ವಾರದ ಗುಗಲ್ಧರ್‌ನಲ್ಲಿ ಜಂಟಿ ಕಾರ್ಯಾಚರಣೆ ಪ್ರಾರಂಭಿಸಿದ್ದರು. ಭಾರತೀಯ ಭದ್ರತಾ ಪಡೆಗಳು ಭಯೋತ್ಪಾದಕರನ್ನು ಇಮ್ಮೆಟ್ಟಲು ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಇಬ್ಬರು ಭಯೋತ್ಪಾಕರನ್ನು ಹತ್ಯೆ ಮಾಡಲಾಗಿದೆ. ಇದಕ್ಕೆ ಪ್ರತಿಯಾಗಿ ಅವರು ಗುಂಡಿನ ದಾಳಿ ನಡೆಸಿದ್ದಾರೆ. ಇದೀಗ ಕಾರ್ಯಚರಣೆಯಲ್ಲೇ ಸೇನೆ ತೋಡಗಿಸಿಕೊಂಡಿದೆ ಎಂದು ಸೇನೆಯ ಚಿನಾರ್ ಕಾರ್ಪ್ಸ್ ಶನಿವಾರ ಎಕ್ಸ್ ನಲ್ಲಿ ಪೋಸ್ಟ್ ಮಾಡಿದೆ. ಶುಕ್ರವಾರ, ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿರುವುದು ನಿಜ ಎಂದು ಅಧಿಕಾರಿಗಳು ಇದೀಗ ಸ್ಪಷ್ಟ ಪಡಿಸಿದ್ದಾರೆ. ಭಯೋತ್ಪಾದಕರ ಭಾರತದ ಗಡಿಯೊಳಗೆ ಬಂದಿದ್ದಾರೆ ಎಂದು ಖಚಿತ ಮಾಹಿತಿಯ ಆಧಾರದ ಮೇಲೆ ಈ ದಾಳಿಯನ್ನು ನಡೆಸಲಾಗಿದೆ. ಕಿಶ್ತ್ವಾರ್ ಜಿಲ್ಲೆಯ ಚತ್ರೂ ಗ್ರಾಮದಲ್ಲಿ ಭದ್ರತಾ ಪಡೆಗಳು ಜಂಟಿ ಶೋಧ ಕಾರ್ಯಾಚರಣೆಯನ್ನು ಈಗಾಗಲೇ ಪ್ರಾರಂಭ ಮಾಡಲಾಗಿದೆ.