ಶಿವಮೊಗ್ಗ : ಕುಮಾರಸ್ವಾಮಿ ಅವರು ಶಾಖೆಗೆ ಭೇಟಿ ನೀಡಿ ಸಂಘದ ಚಟುವಟಿಕೆ ತಿಳಿದುಕೊಳ್ಳುವುದು ಒಳ್ಳೆಯದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಹೇಳಿದರು.
ಆರ್‌ಎಸ್‌ಎಸ್ ವಿರುದ್ಧ ಕುಮಾರಸ್ವಾಮಿ ನೀಡಿರುವ ಹೇಳಿಕೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ಸಂಘದ ವಿರುದ್ಧ ಆರೋಪ ಮಾಡಿದ್ದಾರೆ. ಅವರಿಗೆ ಸಂಘದ ವಿಚಾರಧಾರೆ ಸರಿಯಾಗಿ ತಿಳಿದಿಲ್ಲ. ಕುಮಾರಸ್ವಾಮಿ ಅವರೇ ಶಾಖೆಗೆ ಬಂದು ಸಂಘದ ಶಿಕ್ಷಣ ಪಡೆಯಿರಿ ನಿಮಗೂ ಒಳ್ಳೆಯದು ಆಗುತ್ತದೆ ಎಂದು ಸಲಹೆ ನೀಡಿದರು.
ಕುಮಾರಸ್ವಾಮಿ ನಾಲ್ಕು ದಿನ ಶಾಖೆಗೆ ಬರಲಿ, ಆಮೇಲೆ ಸಂಘದ ಬಗ್ಗೆ ಟೀಕೆ ಮಾಡಲಿ. ಅವರು ಅಧಿಕಾರದಲ್ಲಿದ್ದಾಗ ಅವರ ಕುಟುಂಬದವರಿಗೆ ಸಹಾಯ ಮಾಡಿಕೊಂಡು ಬಂದವರು. ಅವರಿಗೆ ರಾಷ್ಟ್ರಭಕ್ತಿ, ದೇಶದ ಪರಿಕಲ್ಪನೆ, ಚಿಂತನೆಗಳಿಲ್ಲ. ಪಾರ್ಟಿಯನ್ನೇ ಕುಟುಂಬ ರಾಜಕಾರಣಕ್ಕೆ ತಂದವರು, ಅವರಿಗೆ ಆರ್‌ಎಸ್‌ಎಸ್ ವಿಚಾರಧಾರೆಗಳೇನು ಅಂತ ತಿಳಿದಿಲ್ಲ. ಸಂಘ ಇಂದು ಸಂಸ್ಕಾರ, ದೇಶಭಕ್ತಿ ಸಾರುವ ಕೆಲಸ ಮಾಡುತ್ತಿದೆ. ಈ ದೇಶದ ರಾಷ್ಟ್ರಪತಿ, ಈ ದೇಶದ ಪ್ರಧಾನ ಮಂತ್ರಿ ಸಂಘದ ಸ್ವಯಂ ಸೇವಕರು ಎಂದು ಕಟೀಲ್ ಹೇಳಿದರು.