ಕುವೆಂಪು ಪಠ್ಯ ಕೈಬಿಟ್ಟಿಲ್ಲ, ಪರಿಷ್ಕರಣೆ ಸಹ ಮಾಡಿಲ್ಲ : ಶಿಕ್ಷಣ ಇಲಾಖೆ ಸ್ಪಷ್ಟನೆ…

49
firstsuddi

ಬೆಂಗಳೂರು : ರಾಜ್ಯದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ ಸದ್ಯಕ್ಕೆ ಮುಗಿಯುವಂತೆ ಕಾಣುತ್ತಿಲ್ಲ. ರಾಷ್ಟ್ರಕವಿ ಕುವೆಂಪು ಬಗ್ಗೆ ಪಠ್ಯದಲ್ಲಿ ಕೆಲ ಅಂಶಗಳು ಬಿಡಲಾಗಿದೆ ಎಂದು ಆರೋಪ ಕೇಳಿ ಬಂದಿದೆ. ಇದೀಗ ಕುವೆಂಪು ಅವರ ಪಾಠ ಕೈ ಬಿಡಲಾಗಿದೆ ಎನ್ನುವ ಆರೋಪಕ್ಕೆ ಸ್ವತಃ ಶಿಕ್ಷಣ ಇಲಾಖೆ ಸ್ಪಷ್ಟನೆ ನೀಡಿದೆ.

ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ಸಮಿತಿಯವರು 4ನೇ ತರಗತಿ ಪರಿಸರ ಅಧ್ಯಯನ ಅಭ್ಯಾಸ ಸಹಿತ ಪಠ್ಯಪುಸ್ತಕವನ್ನು ಪರಿಷ್ಕರಿಸಿದ್ದು, ಕುವೆಂಪು ಅವರ ಬಗ್ಗೆ ಇದ್ದ ವಿಷಯಾಂಶವನ್ನು ಕೈಬಿಡಲಾಗಿದೆ, ಅವಮಾನಗೊಳಿಸಲಾಗಿದೆ ಎಂದು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ. ಆದರೆ ವಾಸ್ತವವಾಗಿ 4ನೇ ತರಗತಿ ಪರಿಸರ ಅಧ್ಯಯನ ಅಭ್ಯಾಸ ಸಹಿತ ಪಠ್ಯಪುಸ್ತಕವನ್ನು ರೋಹಿತ್ ಚಕ್ರತೀರ್ಥ ಸಮಿತಿಯವರು ಪರಿಷ್ಕರಿಸಿಲ್ಲ.

ಬರಗೂರು ರಾಮಚಂದ್ರಪ್ಪ ಅವರ ಸಮಿತಿಯು 2017-18ನೇ ಸಾಲಿನಲ್ಲಿ ಪರಿಷ್ಕರಿಸಿದ್ದ 4ನೇ ತರಗತಿ ಪರಿಸರ ಅಧ್ಯಯನ ಅಭ್ಯಾಸ ಸಹಿತ ಪಠ್ಯಪುಸ್ತಕದ ‘ಪ್ರತಿಯೊಬ್ಬರೂ ವಿಶಿಷ್ಟ’ ಎಂಬ ಪಾಠದಲ್ಲಿ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ (ಕುವೆಂಪು) ಶೀರ್ಷಿಕೆ ಅಡಿಯಲ್ಲಿ ಇದ್ದ – 9 ಸಾಲುಗಳ ವಿಷಯಾಂಶವನ್ನು 2022-23ನೇ ಸಾಲಿನ ಪರಿಸರ ಅಧ್ಯಯನ ಪಠ್ಯಪುಸ್ತಕದಲ್ಲೂ ಯಾವುದೇ ಬದಲಾವಣೆ ಇಲ್ಲದೆ ಮುಂದುವರೆಸಲಾಗಿದೆ ಎಂದು ಸ್ಪಷ್ಟೀಕರಣ ನೀಡಲಾಗಿದೆ.