ಕೃಷಿ ಕಾಯ್ದೆ ಹಿಂಪಡೆಯುವ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ…

72
firstsuddi

ನವದೆಹಲಿ : ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಮೂಲಗಳು ತಿಳಿಸಿದ್ದು, ಇದೇ 29ರಿಂದ ಆರಂಭವಾಗಲಿರುವ ಸಂಸತ್ ಚಳಿಗಾಲದ ಅಧಿವೇಶನದಲ್ಲಿ ಅಂಗೀಕಾರಗೊಂಡ ಬಳಿಕ ಕಾನೂನಾತ್ಮಕವಾಗಿ ಕಾಯ್ದೆಗಳನ್ನು ವಾಪಸ್ ಪಡೆಯಲಾಗುತ್ತದೆ.

ಈ ತಿಂಗಳ ಕೊನೆಗೆ ಪ್ರಾರಂಭವಾಗುವ ಸಂಸತ್ತಿನ ಅಧಿವೇಶನದಲ್ಲಿ, ನಾವು ಮೂರು ಕಾನೂನುಗಳನ್ನು ರದ್ದುಗೊಳಿಸುವ ಪ್ರಕ್ರಿಯೆಯನ್ನು ಪೂರ್ಣಗೊಳಿಸುತ್ತೇವೆ ಎಂದು ಪ್ರಧಾನಿ ಮೋದಿ ದೇಶವನ್ನುದ್ದೇಶಿಸಿ ಮಾತನಾಡಿದ್ದರು.

ಸುಮಾರು ಒಂದು ವರ್ಷದಿಂದ ದೆಹಲಿ ಗಡಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ನವೆಂಬರ್ 29 ರಿಂದ ಪ್ರಾರಂಭವಾಗುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಕಾನೂನುಗಳನ್ನು ಔಪಚಾರಿಕವಾಗಿ ರದ್ದುಗೊಳಿಸುವವರೆಗೆ ಪ್ರತಿಭಟನಾಕಾರರು ಕಾಯುತ್ತಾರೆ ಎಂದು ರೈತ ನಾಯಕ ರಾಕೇಶ್ ಟಿಕಾಯತ್ ಹೇಳಿದ್ದಾರೆ.