ಕೃಷಿ ಮಸೂದೆಯನ್ನು ವಿರೋಧಿಸಿ ಇಂದು ಭಾರತ್ ಬಂದ್-ರಾಜ್ಯದಲ್ಲಿ ಇಂದು ಹೆದ್ದಾರಿ ಬಂದ್…

131
firstsuddi

ನವದೆಹಲಿ : ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಕೃಷಿ ಮಸುದೆಯನ್ನು ವಿರೋಧಿಸಿ ರೈತ ಸಂಘಟನೆಗಳು ಇಂದು ಭಾರತ್ ಬಂದ್ ಗೆ ಕರೆ ನೀಡಿದ್ದು, ದೇಶದ ಹಲವೆಡೆ ರೈತರು ಬೃಹತ್ ಪ್ರತಿಭಟನಾ ರ್ಯಾಲಿಯನ್ನು ಹಮ್ಮಿಕೊಂಡಿದ್ದಾರೆ. ರೈತ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್‍ಗೆ ಡಿಎಂಕೆ, ಕಾಂಗ್ರೆಸ್ ಹಾಗೂ ತೃಣಮೂಲ ಕಾಂಗ್ರೆಸ್ ಸೇರಿದಂತೆ ವಿವಿಧ ವಿರೋಧ ಪಕ್ಷಗಳು ಬೆಂಬಲ ಸೂಚಿಸಿದ್ದು, ದೇಶದ ಹಲವು ರಾಜ್ಯಗಳಲ್ಲಿ ಭಾರತ್ ಬಂದ್‍ಗೆ ಉತ್ತಮ ಬೆಂಬಲ ಸಿಗುತ್ತಿದೆ.
ಕರ್ನಾಟಕದಲ್ಲಿ ಇಂದು ಯಾವುದೇ ಬಂದ್ ಇರುವುದಿಲ್ಲ. ಆದರೆ ರೈತ ಸಂಘಟನೆಗಳು ರಾಜ್ಯಾದ್ಯಂತ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲು ಮುಂದಾಗಿದೆ. ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲೆ ಹಾಗೂ ತಾಲ್ಲೂಕುಗಳಲ್ಲಿ ರೈತ ಸಂಘಟನೆಗಳು ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳನ್ನು ತಡೆದು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.