ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲು…

234
firstsuddi

ಬಳ್ಳಾರಿ : ಕೃಷಿ ಹೊಂಡದಲ್ಲಿ ಈಜಲು ತೆರಳಿ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಕೊಟ್ಟೂರು ತಾಲ್ಲೂಕಿನ ಜಾಗಟಗೇರಿಯಲ್ಲಿ ನಡೆದಿದೆ. ರಮೇಶ್(14) ಹಾಗೂ ನವೀನ್(14) ಮೃತ ಬಾಲಕರು ಎಂದು ಗುರುತಿಸಲಾಗಿದ್ದು, ರಮೇಶ್ ಹಾಗೂ ನವೀನ್ ನಿನ್ನೆ ಸಂಜೆ ಶಾಲೆಯಿಂದ ಮನೆಗೆ ಬಂದ ಬಳಿಕ ಇಬ್ಬರು ಈಜಲೆಂದು ಕೃಷಿಹೊಂಡಕ್ಕೆ ತೆರಳಿದ್ದರು. ಈ ವೇಳೆ ಈಜು ಬಾರದೆ ಇಬ್ಬರು ನೀರಲ್ಲಿ ಮುಳುಗಿ ಮೃತಪಟ್ಟಿದ್ದು, ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಇಬ್ಬರ ಮೃತದೇಹವನ್ನು ಹೊರತೆಗೆದಿದ್ದು, ಈ ಕುರಿತು ಕೊಟ್ಟೂರು ಠಾಣಾ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.