ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ಬಾಲಕರು ನೀರುಪಾಲು…

89
firstsuddi

ಚಿಕ್ಕಬಳ್ಳಾಪುರ : ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ಬಾಲಕರು ನೀರುಪಾಲಾಗಿರುವ ಘಟನೆ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ವಾಟದಹೊಸಹಳ್ಳಿ ಬಳಿಯ ಹಳೆ ಊರು ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕರನ್ನು ಹರಿ ಚರಣ್ ರೆಡ್ಡಿ (13) ಹಾಗೂ ಲಿಖಿತ್ (14) ಎಂದು ಗುರುತಿಸಲಾಗಿದ್ದು, ಇಬ್ಬರೂ ಬಾಲಕರು 9ನೇ ತರಗತಿಯಲ್ಲಿ ಓದುತ್ತಿದ್ದರು.

ಮೃತ ಬಾಲಕರು ನಿನ್ನೆ ಮಧ್ಯಾಹ್ನ ಈಜಾಡಲು ಗ್ರಾಮದ ಹೊರವಲಯದ ಜಯಣ್ಣ ಎಂಬುವವರಿಗೆ ಸೇರಿದ ಕೃಷಿಹೊಂಡದ ಬಳಿ ತೆರಳಿದ್ದಾರೆ.ಆದರೆ ಈಜು ಬಾರದ ಹಿನ್ನೆಲೆಯಲ್ಲಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.

ಸಂಜೆಯಾದರೂ ಮಕ್ಕಳು ಮನೆಗೆ ಬಾರದ ಹಿನ್ನಲೆ ಪೋಷಕರು ಹುಡುಕಾಡಿದಾಗ ಘಟನೆ ಬೆಳಕಿಗೆ ಬಂದಿದೆ. ಸದ್ಯ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.