ಕೃಷ್ಣಾ ಜನ್ಮಾಷ್ಟಮಿ ಆಚರಿಸುವ ವೇಳೆ ದೇವಾಲಯದ ಗೋಡೆ ಕುಸಿದು 4 ಮಂದಿ ಸಾವು, 27ಮಂದಿಗೆ ಗಾಯ…

504
firstsuddi

ಕೊಲ್ಕತ್ತಾ : ಕೃಷ್ಣಾ ಜನ್ಮಾಷ್ಟಮಿ ಆಚರಿಸುತ್ತಿದ್ದ ವೇಳೆ ದೇವಾಲಯದ ಗೋಡೆ ಕುಸಿದು ಬಿದ್ದು 4ಮಂದಿ ಸ್ಥಳದಲ್ಲೇ ಮೃತಪಟ್ಟು 27ಮಂದಿ ಗಾಯಗೊಂಡಿರುವ ಘಟನೆ ಪಶ್ಚಿಮ ಮಂಗಾಳದ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಕಚ್ ಪ್ರದೇಶದಲ್ಲಿ ಇರುವ ದೇವಾಲಯದಲ್ಲಿ ಕೃಷ್ಣಾ ಜನ್ಮಾಷ್ಟಮಿ ಆಚರಿಸುತ್ತಿದ್ದ ವೇಳೆ ದೇವಾಲಯದ ಗೋಡೆ ಕುಸಿದ ಪರಿಣಾಮ ಸ್ಥಳದಲ್ಲೇ 4ಮಂದಿ ಮೃತಪಟ್ಟಿದ್ದು, 27 ಮಂದಿ ಗಾಯಗೊಂಡಿದ್ದಾರೆ. ಗೋಡೆ ಕುಸಿದ ಪರಿಣಾಮ ದೇವಾಲಯದ ಸುತ್ತ ಮುತ್ತ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಘಟನೆಯಲ್ಲಿ ಗಾಯಗೊಂಡವರನ್ನು ಜಿಲ್ಲೆಯ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮೃತರ ಕುಟುಂಬಕ್ಕೆ 5ಲಕ್ಷ ರೂ ಪರಿಹಾರವನ್ನು ಘೋಷಿಸಿದ್ದು, ಗಂಭೀರವಾಗಿ ಗಾಯಗೊಂಡವರಿಗೆ 1ಲಕ್ಷ ಹಾಗೂ ಸಣ್ಣ ಪುಟ್ಟ ಗಾಯಗಳಾಗಿರುವವರಿಗೆ 50ಸಾವಿರ ಪರಿಹಾರವನ್ನು ಘೋಷಿಸಿದ್ದಾರೆ.