ಉತ್ತರ ಕನ್ನಡ: ಕೆಎಸ್‌ಆರ್‌ಟಿಸಿ ಬಸ್ಸಿನಡಿ ಸಿಲುಕಿ ತಾಯಿ- ಮಗಳು ಸಾವನ್ನಪ್ಪಿದ್ದ ದಾರುಣ ಘಟನೆ ಜಿಲ್ಲೆಯ ಹೊನ್ನಾವರದ ಮಂಕಿಯಲ್ಲಿ ನಡೆದಿದೆ.
ಸವಿತಾ ರಾಜು ಆಚಾರಿ (40) ಹಾಗೂ ಅಂಕಿತಾ ರಾಜು ಆಚಾರಿ (17) ಮೃತ ರ್ದುದೈವಿಗಳು. ಮಂಕಿ ಜಾತ್ರೆ ಪೇಟೆಗೆ ತೆರಳಿ ವಾಪಾಸ್ಸಾಗುತ್ತಿದ್ದ ವೇಳೆ ಮಂಗಳೂರಿನಿಂದ ಬೆಳಗಾವಿಯತ್ತ ತೆರಳುತ್ತಿದ್ದ ಬಸ್, ಸ್ಕೂಟಿಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಸ್ಕೂಟಿಯಲ್ಲಿದ್ದ ಇಬ್ಬರು ಬಸ್ಸಿನಡಿ ಸಿಲುಕಿ ತೀವ್ರ ಗಾಯಗೊಂಡಿದ್ದಾರೆ.
ಕೂಡಲೇ ಭಟ್ಕಳದ ಸರಕಾರಿ ಆಸ್ಪತ್ರೆಗೆ ಗಾಯಾಳುಗಳನ್ನು ದಾಖಲಿಸಲಾದರೂ, ಚಿಕಿತ್ಸೆ ಫಲಕಾರಿಯಾಗದೇ ಇಬ್ಬರೂ ಕೊನೆಯುಸಿರೆಳೆದಿದ್ದಾರೆ.
ಈ ಕುರಿತು ಹೊನ್ನಾವರ ಮಂಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










