ದಾವಣೆಗೆರೆ: ಜಿಲ್ಲೆಯ ನ್ಯಾಮತಿ ತಾಲೂಕಿನ ಚಿನ್ನಕಟ್ಟೆ-ಶಿವಪುರ ಬಳಿ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದು ಓಮಿನಿಯಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
ಸೂರಗೊಂಡನಕೊಪ್ಪ ನಿವಾಸಿಗಳಾದ ದೇವರಾಜ್(27), ರಾಕೇಶ್(30) ಹಾಗೂ ಹರಮಘಟ್ಟ ಗ್ರಾಮದ ನಿವಾಸಿ ನಂಜುಂಡಪ್ಪ(83) ಮೃತ ದುರ್ದೈವಿಗಳು. ಇನ್ನುಳಿದಂತೆ ಆರಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ತೀವ್ರ ಗಾಯಗೊಂಡ ಇಬ್ಬರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಈ ಸಂಬಂಧ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










