ಕೆಎಸ್​ಆರ್​ಟಿಸಿ ಬಸ್ ಕಂಡಕ್ಟರ್ ಆತ್ಮಹತ್ಯೆಗೆ ಶರಣು…

73
firstsuddi

ಕೋಲಾರ: ಕೆಎಸ್​ಆರ್​ಟಿಸಿ ಬಸ್ ಕಂಡಕ್ಟರ್ ಒಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಂದು ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಉಪ್ಪುಕುಂಟೆ ಗ್ರಾಮದಲ್ಲಿ ನಡೆದಿದೆ.

ಉಪ್ಪುಕುಂಟೆ ಗ್ರಾಮದ ಸೋಮಾಚಾರಿ (50) ಆತ್ಮಹತ್ಯೆ ಮಾಡಿಕೊಂಡ ಕಂಡಕ್ಟರ್. ಮೃತ ಕಂಡಕ್ಟರ್ ಇತ್ತೀಚೆಗೆ ಪೆರಾಲಿಸಿಸ್ ಕಾಯಿಲೆಗೆ ತುತ್ತಾಗಿದ್ದರು. ಈ ಮಧ್ಯೆ ಕೆಲಸದ ವೇಳೆ ಶ್ರೀನಿವಾಸಪುರ ಡಿಪೋ ಮ್ಯಾನೇಜರ್ ವೆಂಕಟೇಶ್ ಎಂಬುವವರು ಉದ್ದೇಶಪೂರ್ವಕವಾಗಿ ಕಿರುಕುಳ ನೀಡುತ್ತಿದ್ದರು ಎಂದು ಆರೋಪ ಕೇಳಿಬಂದಿದ್ದು, ಇದರಿಂದ ಮಾನಸಿಕವಾಗಿ ನೊಂದಿದ್ದ ಸೋಮಾಚಾರಿ ಅವರು, ತಮ್ಮ ತೋಟದಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಘಟನೆ ಸಂಬಂಧ ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.