ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ – 47 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು…

47
firstsuddi

ಕಾರವಾರ : ಚಲಿಸುತ್ತಿದ್ದ ವೇಳೆ ಸ್ಟೇರಿಂಗ್ ಕಟ್ ಆಗಿ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ 16ನೇ ಮೈಲಿಕಲ್ ಬಳಿ ನಡೆದಿದೆ.

ಹಳಿಯಾಳದಿಂದ ಶಿವಮೊಗ್ಗ ಜಿಲ್ಲೆಯ ಸಾಗರಕ್ಕೆ 47 ಜನ ಪ್ರಯಾಣಿಕರನ್ನು ಕರೆದೊಯ್ಯುತಿದ್ದ ಬಸ್ ತಿರುವಿನಲ್ಲಿ ಚಲಿಸುತ್ತಿದ್ದ ವೇಳೆ ಸ್ಟೇರಿಂಗ್ ತುಂಡಾಗಿದೆ. ಇದರಿಂದ ನಿಯಂತ್ರಣ ತಪ್ಪಿದ ಬಸ್ ಕಂದಕಕ್ಕೆ ಉರುಳಿದೆ. ಉರುಳಿದ ಬಸ್ ಮರಕ್ಕೆ ಡಿಕ್ಕಿ ಹೊಡೆದಿರುವುದರಿಂದ ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಒಂದೆರಡು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಸಿದ್ದಾಪುರ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.