ಮಂಗಳೂರು : ಕೆಎಸ್ಆರ್‌ಟಿಸಿ ಬಸ್ ಹರಿದು ತಾಯಿ, ಮಗು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲ್ಲೂಕಿನ ಉಪ್ಪಿನಂಗಡಿ ಬಳಿ ಸಂಭವಿಸಿದೆ.
ಬೆಳ್ತಂಗಡಿ ತಾಲೂಕಿನ ಶಿರ್ಲಾಲು ನಿವಾಸಿ ಶಾಹಿದಾ(25) ಹಾಗೂ ಒಂದು ವರ್ಷದ ಪುತ್ರ ಶಾಹೀಲ್ ಮೃತ ದುರ್ದೈವಿಗಳು. ಗೇರುಕಟ್ಟೆಯ ತಾಯಿ ಮನೆಗೆ ಬಂದಿದ್ದ ಶಾಹಿದಾ ಇಂದು ಬೆಳಗ್ಗೆ ಪುತ್ತೂರಿಗೆ ವೈದ್ಯರ ಬಳಿ ತನ್ನ ಮಗನೊಂದಿಗೆ ತೆರಳುತ್ತಿದ್ದರು. ಹೀಗಾಗಿ ಬಸ್ ನಿಲ್ದಾಣಕ್ಕೆ ಬಂದಿದ್ದರು. ಈ ವೇಳೆ ಅತಿ ವೇಗದಿಂದ ಬಸ್ ನಿಲ್ದಾಣದ ಒಳಗೆ ಬಂದ ಕೆಎಸ್ಆರ್‌ಟಿಸಿ ಬಸ್ ಅಡಿ ತಾಯಿ- ಮಗ ಸಿಕ್ಕಿ ಕೆಳಗೆ ಬಿದ್ದಿದ್ದಾರೆ. ತಲೆಯ ಮೇಲೆ ಬಸ್ ಹರಿದ ಪರಿಣಾಮ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಉಪ್ಪಿನಗಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










