ತುಮಕೂರು : ಕೆಎಸ್‌ಆರ್‌ಟಿಸಿ ಬಸ್ಸನ್ನೇ ಕಳ್ಳರು ಕದ್ದಿರುವ ಘಟನೆ ಗುಬ್ಬಿ ಬಸ್ ನಿಲ್ದಾಣದಲ್ಲಿ ನಡೆದಿದೆ.
ಗುಬ್ಬಿ ಬಸ್ ನಿಲ್ದಾಣದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಕದ್ದು, ಸಿಎಸ್ ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಜನ್ನೇನಹಳ್ಳಿ ಗ್ರಾಮದ ಬಳಿ ಬಿಟ್ಟು ಹೋಗಿದ್ದಾರೆ. ಕಳ್ಳರು ಬಸ್ಸಿನಿಂದ ಡೀಸೆಲ್ ಕದ್ದು, ಬಳಿಕ ಇಲ್ಲಿ ಬಿಟ್ಟು ಹೋಗಿರಬಹುದೆಂದು ಶಂಕಿಸಲಾಗಿದೆ.
ಗುಬ್ಬಿ ಬಸ್ ನಿಲ್ದಾಣದಲ್ಲಿ ಇಂತಹ ಘಟನೆಗಳು ಪದೇ ಪದೇ ನಡೆಯುತ್ತಿದ್ದರೂ ಬಸ್ ನಿಲ್ದಾಣದಲ್ಲಿ ಮಾತ್ರ ಅಧಿಕಾರಿಗಳು ಸಿಸಿಟಿವಿಯನ್ನು ಅಳವಡಿಸಿಲ್ಲ ಎಂದು ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಅಸಮಾಧಾನ ಹೊರಹಾಕಿದ್ದಾರೆ.
ಗುಬ್ಬಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.










