ಕೆಎಸ್ಆರ್​ಟಿ‌ಸಿ ಬಸ್ ಹಾಗೂ ಟಾಟಾ ಏಸ್ ನಡುವೆ ಡಿಕ್ಕಿ- ಸ್ಥಳದಲ್ಲೇ ಮೂವರ ಸಾವು…

216
firstsuddi

ಬಳ್ಳಾರಿ : ಕೆಎಸ್ಆರ್​ಟಿ‌ಸಿ ಬಸ್ ಹಾಗೂ ಟಾಟಾ ಏಸ್ ನಡುವೆ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಕೂಡ್ಲಿಗೆ ತಾಲ್ಲೂಕಿನ ಶಿವಪುರ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ಪ್ರಕಾಶ್(35), ನಾಗಣ್ಣ(53) ಹಾಗೂ ನಾಗಮ್ಮ(23) ಮೃತ ದುರ್ದೈವಿಗಳು ಎನ್ನಲಾಗಿದ್ದು, ಕೆಎಸ್‍ಆರ್‍ಟಿಸಿ ಬಸ್ ಬೆಂಗಳೂರಿನಿಂದ ಹೊಸಕೋಟೆ ಕಡೆಗೆ ತೆರಳುತ್ತಿದ್ದ ವೇಳೆ ಎದುರಿಗೆ ಬರುತ್ತಿದ್ದ ಟಾಟಾ ಏಸ್ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವನಿಗೆ ಗಂಭೀರ ಗಾಯವಾಗಿದೆ. ಗಾಯಾಳುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಕೂಡ್ಲಿಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.