ಕೆಜಿಎಫ್-2 ಸಿನಿಮಾ ವೀಕ್ಷಣೆ ವೇಳೆ ಯುವಕನ ಮೇಲೆ ಗುಂಡಿನ ದಾಳಿ…

66
firstsuddi

ಹಾವೇರಿ : ಕೆಜಿಎಫ್ ಚಾಪ್ಟರ್ – 2 ಸಿನಿಮಾ ವೀಕ್ಷಣೆ ವೇಳೆ ಯುವಕನ ಮೇಲೆ ಗುಂಡಿನ ದಾಳಿ ನಡೆದಿದೆ. ಜಿಲ್ಲೆಯ ಶಿಗ್ಗಾಂವ್ ಪಟ್ಟಣದ ರಾಜಶ್ರೀ ಥಿಯೇಟರ್ ನಲ್ಲಿ ನಿನ್ನೆ ರಾತ್ರಿ ಸುಮಾರು 10.30ಕ್ಕೆ ಘಟನೆ ನಡೆದಿದೆ.

ಗುಂಡೇಟಿನಿಂದ ಗಾಯಗೊಂಡವನನ್ನು ವಸಂತಕುಮಾರ ಶಿವಪುರ(27) ಎಂದು ಗುರುತಿಸಲಾಗಿದೆ. ದುಷ್ಕರ್ಮಿ ರಿವಾಲ್ವಾರ್ ನಿಂದ ಮೂರು ಸುತ್ತು ಗುಂಡು ಹಾರಿಸಿದ್ದಾನೆ. ಯುವಕನ ಹೊಟ್ಟೆಯ ಭಾಗ ಮತ್ತು ಕಾಲಿಗೆ ಗುಂಡು ತಗುಲಿದ್ದು, ಸದ್ಯ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಎಸ್ಪಿ ಹನುಮಂತರಾಯ, ಹೆಚ್ಚುವರಿ ಎಸ್ಪಿ ವಿಜಯಕುಮಾರ ಸೇರಿದಂತೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಿತ್ರವೀಕ್ಷಣೆ ವೇಳೆ ಕಾಲು ತಗುಲಿದೆ ಎಂಬ ವಿಚಾರಕ್ಕೆ ಮಾತಿನ ಚಕಮಕಿ ನಡೆದು ಗುಂಡಿನ ದಾಳಿ ನಡೆದಿದೆ ಎಂದು ತಿಳಿದುಬಂದಿದೆ. ಘಟನೆ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದು, ಆತನ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.