ಕೆನಡಾದಿಂದ ಅಮೆರಿಕಕ್ಕೆ ಅಕ್ರಮ ಪ್ರವೇಶಕ್ಕೆ ಯತ್ನ – ಭಾರತೀಯರು ಸೇರಿ ಎಂಟು ಮಂದಿ ಸಾವು…

60
firstsuddi

ವಾಷಿಂಗ್ಟನ್ : ಕೆನಡಾದಿಂದ ಅಮೆರಿಕಕ್ಕೆ ಅಕ್ರಮವಾಗಿ ಗಡಿ ದಾಟಲು ಪ್ರಯತ್ನಿಸುತ್ತಿದ್ದಾಗ ನದಿಯಲ್ಲಿ ಮುಳುಗಿ ಮೃತಪಟ್ಟ ಎಂಟು ಜನರಲ್ಲಿ ಭಾರತೀಯ ಕುಟುಂಬದ ಸದಸ್ಯರು ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೃತರೆಲ್ಲರೂ ಸೇಂಟ್ ಲಾರೆನ್ಸ್ ನದಿಯಲ್ಲಿ ದೋಣಿ ಮೂಲಕ ಕೆನಡಾದಿಂದ ಅಮೆರಿಕ ಪ್ರವೇಶಿಸಲು ಯತ್ನಿಸುತ್ತಿದ್ದರು. ಆದರೆ ಕೆನಡಾ- ಅಮೆರಿಕ ಗಡಿಯ ಬಳಿಯ ಜವುಗು ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. 

ವೈಮಾನಿಕ ಶೋಧ ನಡೆಸಿದಾಗ ಮೊದಲ ಶವ ಪತ್ತೆಯಾಗಿದೆ. ನಾಪತ್ತೆ ಆದವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಸಾವಿಗೆ ಇನ್ನೂ ನಿಖರ ಕಾರಣ ತಿಳಿದುಬಂದಿಲ್ಲ ಎಂದು ಕೆನಡಾ ಅಧಿಕಾರಿಗಳು ಮಾಹಿತಿ ನೀಡಿದರು.