ಕೆನಡಾ ಪ್ರಧಾನಿ ಟ್ರುಡೋ ಇಂದೇ ರಾಜೀನಾಮೆ.

26

ಒಟ್ಟಾವಾ: ಖಲಿಸ್ತಾನ ಉಗ್ರ ಸಂಘಟನೆಯ ವಿಚಾರ ಹಿಡಿದುಕೊಂಡು ಭಾರತದೊಂದಿಗೆ ಚೇಷ್ಟೆ ಮಾಡಿದ್ದ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೋ ಇಂದು ರಾಜೀನಾಮೆ ನೀಡುವ ಸಾಧ್ಯತೆ ಹೆಚ್ಚಾಗಿದೆ. ಟ್ರುಡೋ ಪ್ರತಿನಿಧಿಸುತ್ತಿರುವ ಲಿಬರಲ್ ಪಕ್ಷದ ಸಂಸದರೇ ಈಗ ಪ್ರಧಾನಿ ವಿರುದ್ಧ ತಿರುಗಿ ಬಿದ್ದಿದ್ದು ರಾಜೀನಾಮೆಗೆ ಆಗ್ರಹಿಸಲಾಗಿದೆ ಎಂದು ವರದಿಯಾಗಿದೆ. ಟ್ರುಡೋ ಯಾವಾಗ ರಾಜೀನಾಮೆ ಘೋಷಿಸುತ್ತಾರೆ ಎಂಬುದು ಖಚಿತವಾಗಿ ಮಾಹಿತಿ ತಿಳಿದುಬಂದಿಲ್ಲ. ಬುಧವಾರದ ಪಕ್ಷದ ರಾಷ್ಟ್ರೀಯ ಸಭೆ ನಡೆಯುವ ಮೊದಲೇ ಅವರು ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿಸಲಾಗಿದೆ. ಪಕ್ಷದ ಆಂತಂರಿಕ ಸಮಸ್ಯೆ ಹಿನ್ನೆಲೆಯಲ್ಲಿ ಏಕಾಏಕಿ ರಾಜೀನಾಮೆ ಘೋಷಣೆ ಮಾಡುತ್ತಾರಾ ಅಥವಾ ಹೊಸ ನಾಯಕತ್ವ ಆಯ್ಕೆವರೆಗೂ ಪ್ರಧಾನಿಯಾಗಿ ಮುಂದುವರೆಯುತ್ತಾರೋ ಎಂದು ಇನ್ನೂ ಸ್ಪಷ್ಟವಾಗಿ ತಿಳಿದಿಲ್ಲ. ಟ್ರುಡೋ ಅವರು 2013 ರಲ್ಲಿ ಲಿಬರಲ್ ನಾಯಕರಾಗಿ ಅಧಿಕಾರ ವಹಿಸಿಕೊಂಡರು. ಅಕ್ಟೋಬರ್ ಅಂತ್ಯದಲ್ಲಿ ಕೆನಡಾದಲ್ಲಿ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ಲಿಬರಲ್ ಪಕ್ಷ ಹೀನಾಯವಾಗಿ ಸೋಲಲಿದೆ ಎಂದು ಸಮೀಕ್ಷೆಗಳು ಈಗಾಗಲೇ ತಿಳಿಸಿದೆ.