ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರಿಗೆ 5 ಲಕ್ಷ ರೂ ದಂಡ ವಿಧಿಸಿದ ಹೈಕೋರ್ಟ್…

162
firstsuddi

ಬೆಂಗಳೂರು : ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರಿಗೆ ಹೈಕೋರ್ಟ್ 5 ಲಕ್ಷ ದಂಡ ವಿಧಿಸಿ ಆದೇಶ ಹೊರಡಿಸಿದೆ. ಡಿ.ಕೆ. ಸಿದ್ರಾಮ ಅವರು ಈಶ್ವರ್ ಖಂಡ್ರೆ ಅವರು ಚುನಾವಣೆಯಲ್ಲಿ ವ್ಯಾಪಕ ಅಕ್ರಮ ನಡೆಸಿದ್ದಾರೆ. ಅವರು ತನ್ನ ಆಸ್ತಿ ವಿವರವನ್ನು ಬಹಿರಂಗಪಡಿಸಿಲ್ಲ ಇದರಿಂದಾಗಿ ಶಾಸಕರಾಗಿ ಈಶ್ವರ್ ಖಂಡ್ರೆ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಹೈಕೋರ್ಟ್‍ಗೆ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ಈಶ್ವರ್ ಖಂಡ್ರೆ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ಜಾರಿ ಮಾಡಿತ್ತು. ಆದರೆ ಈಶ್ವರ್ ಖಂಡ್ರೆ ಅವರು ವಿಚಾರಣೆಗೆ ಹಾಜರಾಗಿರಲಿಲ್ಲ. ಈ ಹಿನ್ನೆಲೆ ಹೈಕೋರ್ಟ್ ಈಶ್ವರ್ ಕಂಡ್ರೆ ಅವರಿಗೆ 5 ಲಕ್ಷ ರೂ. ದಂಡ ವಿಧಿಸಿದೆ. ಹಾಗೂ ದಂಡದ 5 ಲಕ್ಷ ರೂ. ಹಣವನ್ನು ಸಿಎಂ ಕೋವಿಡ್-19 ನಿಧಿಗೆ ನೀಡುವಂತೆ ಆದೇಶ ಸೂಚಿಸಿದೆ.