ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೆ ಮಾತೃ ವಿಯೋಗ…

120
firstsuddi

ಬೆಂಗಳೂರು : ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡರಾವ್ ಅವರ ತಾಯಿ ವರಲಕ್ಷ್ಮೀ ಗುಂಡೂರಾವ್ (72)ಅವರು ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ನಿಧನರಾಗಿದ್ದಾರೆ. ಮೃತರ ಅಂತ್ಯಕ್ರಿಯೆಯನ್ನು ಇಂದು ಸಂಜೆ 4 ಗಂಟೆಗೆ ದೇವನಹಳ್ಳಿಯ ತೋಟದಲ್ಲಿ ನಡೆಸಲು ಕುಟುಂಬದವರು ನಿರ್ಧರಿಸಿದ್ದಾರೆ. ಮೃತರು ಇಬ್ಬರು ಮಕ್ಕಳಾದ ದಿನೇಶ್ ಗುಂಡೂರಾವ್ ಹಾಗೂ ಮಹೇಶ್ ಗುಂಡೂರಾವ್ ಅವರನ್ನು ಬಿಟ್ಟು ಅಗಲಿದ್ದಾರೆ.
ವರಲಕ್ಷ್ಮೀ ಅವರ ಸಾವಿನ ಸುದ್ದಿ ತಿಳಿದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಮ್ಮ ಟ್ವೀಟರ್ ಮೂಲಕ ವರಲಕ್ಷ್ಮೀ ಅವರ ಸಾವಿನ ಸುದ್ದಿ ತಿಳಿದು ಅಘಾತವಾಯಿತು. ಈ ದುಃಖದ ಸಮಯದಲ್ಲಿ ಗುಂಡೂರಾವ್ ಕುಟುಂಬಕ್ಕೆ ನಾನು ಸಂತಾಪ ಸೂಚಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ .